ಮಂಗಳೂರು: ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆ, ಗ್ರಾಹಕ ಸ್ನೇಹಿ ಸೇವೆ ಹಾಗೂ ಸಿಬ್ಬಂದಿಯ ಸಮರ್ಪಣಾ ಮನೋಭಾವದಿಂದಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ (ಎಸ್ಸಿಡಿಸಿಸಿ) ಬ್ಯಾಂಕ್ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದೆ ಎಂದು ಬ್ಯಾಂಕಿನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.

ಬ್ಯಾಂಕಿನ ವಿವಿಧ ವಿಭಾಗಗಳಲ್ಲಿ ಸಾಧನೆ ಮಾಡಿರುವ ಶಾಖಾ ವ್ಯವಸ್ಥಾಪಕರು ಮತ್ತು ಸಿಬ್ಬಂದಿಗೆ ಬ್ಯಾಂಕಿನ ಕೇಂದ್ರ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಎಸ್ಸಿಡಿಸಿಸಿ ಬ್ಯಾಂಕ್ ರಾಜ್ಯದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮಾದರಿ ಸಂಸ್ಥೆಯಾಗಿ ಹೊರಹೊಮ್ಮಿದೆ. ಠೇವಣಿ ಸಂಗ್ರಹಣೆ, ಸಾಲ ವಿತರಣೆ ಹಾಗೂ ಸಾಲ ವಸೂಲಾತಿಯಲ್ಲಿ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ಗೆ ಸಮಾನವಾಗಿ ಬೆಳೆಯುವ ಗುರಿ ಇದೆ. ಬ್ಯಾಂಕಿನ 113 ಶಾಖೆಗಳಲ್ಲಿ ಅತ್ಯಾಧುನಿಕ ಕೋರ್ ಬ್ಯಾಂಕಿಂಗ್ ವ್ಯವಸ್ಥೆ ಅಳವಡಿಸಲಾಗಿದೆ. ತ್ವರಿತ, ಸುರಕ್ಷಿತ ಮತ್ತು ವಿಶ್ವಾಸಾರ್ಹ ಸೇವೆ ಮೂಲಕ ಗ್ರಾಹಕರ ವಿಶ್ವಾಸ ಗಳಿಸಿದ್ದೇವೆ. ಸಿಬ್ಬಂದಿಯ ಪರಿಶ್ರಮದಿಂದ ಬ್ಯಾಂಕ್ ರಾಷ್ಟ್ರಮಟ್ಟದಲ್ಲೂ ಗುರುತಿಸಿಕೊಂಡಿದೆ’ ಎಂದರು.

ಡಿಜಿಟಲ್ ಸೇವೆಗೆ ಒತ್ತು: ‘ವಿವಿಧ ಸಾಲ ಸೌಲಭ್ಯ, ಠೇವಣಿಗಳ ಮೇಲೆ ಆಕರ್ಷಕ ಬಡ್ಡಿದರ, ಸುರಕ್ಷಿತ ಲಾಕರ್ ವ್ಯವಸ್ಥೆ, ಆರ್ಟಿಜಿಎಸ್/ನೆಫ್ಟ್ ಸೇರಿದಂತೆ ಸಂಪೂರ್ಣ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುತ್ತಿದ್ದೇವೆ. ಯುಪಿಐ ಮತ್ತು ಐಎಂಪಿಎಸ್ ಸೇವೆಗಳನ್ನು ಪರಿಚಯಿಸಿ ಬ್ಯಾಂಕಿಂಗ್ ಅನ್ನು ಮತ್ತಷ್ಟು ಬಲಪಡಿಸಲಾಗಿದೆ’ ಎಂದು ಎಂಎನ್ಆರ್ ತಿಳಿಸಿದರು.

ಸತತ 5ನೇ ಸಲ ಎಪಿವೈ ರಾಷ್ಟ್ರೀಯ ಪ್ರಶಸ್ತಿ :ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಅಟಲ್ ಪಿಂಚಣಿ ಯೋಜನೆ (ಎಪಿವೈ)’ ಪರಿಣಾಮಕಾರಿ ಜಾರಿಗಾಗಿ ಬ್ಯಾಂಕ್ಗೆ ಸತತ ಐದನೇ ವರ್ಷ (2021-22ರಿಂದ 2025-26ರವರೆಗೆ) ‘ಎಪಿವೈ ರಾಷ್ಟ್ರೀಯ ಪ್ರಶಸ್ತಿ’ ಲಭಿಸಿದೆ. ಇದು ಸಿಬ್ಬಂದಿಯ ಪ್ರಾಮಾಣಿಕ ಸೇವೆಗೆ ಸಾಕ್ಷಿ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬ್ಯಾಂಕಿನ ಸಿಬ್ಬಂದಿ ಪರವಾಗಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಕೆ. ಗೋಪಾಲಕೃಷ್ಣ ಭಟ್, ಮಹಾಪ್ರಬಂಧಕ ಸುನಿಲ್ ಕುಮಾರ್ ಹೊಳ್ಳ ಅವರು ಅಧ್ಯಕ್ಷರಿಂದ ₹10 ಸಾವಿರ ಮೌಲ್ಯದ ಉಡುಗೊರೆ ಕೂಪನ್ ಸ್ವೀಕರಿಸಿದರು.

2025-26ನೇ ಸಾಲಿನಲ್ಲಿ ತಾಲ್ಲೂಕು ಮಟ್ಟದಲ್ಲಿ ಸಮಗ್ರ ಸಾಧನೆ ತೋರಿದ ಶಾಖಾ ವ್ಯವಸ್ಥಾಪಕರು, ವೈಯಕ್ತಿಕ ಠೇವಣಿ ಸಂಗ್ರಹ, ನೇರ ಸಾಲ ವಿತರಣೆ ಹಾಗೂ ಅನುತ್ಪಾದಕ ಸಾಲದ ಪ್ರಮಾಣವನ್ನು ಶೂನ್ಯ ಮಟ್ಟಕ್ಕೆ ತರುವಲ್ಲಿ ಸಾಧನೆಗೈದ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-29-2120681258

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.