ಮಂಗಳೂರು: ರಾಜ್ಯದಲ್ಲಿನ ಗಲಭೆಕೋರರ ವಿರುದ್ಧ ದಾಖಲಾದ ಪ್ರಕರಣಗಳನ್ನು ಹಿಂಪಡೆಯುವ ರಾಜ್ಯ ಸರ್ಕಾರದ ಕ್ರಮ ಸರಿಯಲ್ಲ ಎಂದು ಆರೋಪಿಸಿ, ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಸೋಮವಾರ ಇಲ್ಲಿ ಪ್ರತಿಭಟನೆ ನಡೆಸಿತು.

ಗಲಭೆಕೋರರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಶಕ್ತಿಗಳಿಗೆ ಸರ್ಕಾರ ಉತ್ತೇಜನ ನೀಡುತ್ತಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು. ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ಹಲ್ಲೆ, ದೌರ್ಜನ್ಯ ಹಾಗೂ ಕಾನೂನು ಕೈಗೆತ್ತಿಕೊಳ್ಳುವ ಘಟನೆಗಳನ್ನು ತಕ್ಷಣ ತಡೆಗಟ್ಟಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಎಸ್ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಿಯಾಝ್ ಪರಂಗಿಪೇಟೆ ಮಾತನಾಡಿ, ‘ಬಿಜೆಪಿ, ಸಂಘ ಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡು ಅದನ್ನು ಸಾಮಾಜಿಕ ಮಾಧ್ಯಮ, ರಾಷ್ಟ್ರೀಯ ಮಾಧ್ಯಮಗಳಲ್ಲಿ ತಮಗೆ ಬೇಕಾದಂತೆ ಚರ್ಚೆ ನಡೆಸಿ ಸುಳ್ಳನ್ನು ಸತ್ಯವೆಂದು ಪ್ರಚುರಪಡಿಸುತ್ತಿದೆ. ಗೋ ಸಾಗಣೆ ತಡೆಯುವ ಸಂಘ ಪರಿವಾರದ ಕಾರ್ಯಕರ್ತರೊಂದಿಗೆ ಕೆಲವೊಮ್ಮೆ ಪೊಲೀಸ್ ಇಲಾಖೆ ಕೂಡ ಸಾಥ್ ನೀಡುತ್ತದೆ. ಗೋ ಸಾಗಿಸುವವರನ್ನು ಠಾಣೆಗೆ ಕರೆದೊಯ್ಯುವ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸುತ್ತಾರೆ. ಆದರೆ, ಕಾನೂನು ಕೈಗೆತ್ತಿಕೊಂಡ ಸಂಘ ಪರಿವಾರದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ’ ಎಂದು ದೂರಿದರು.

ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಮಾತನಾಡಿ, ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರ ಸೇರಿದಂತೆ ಹಲವು ಬಾಡಿಗೆ ದ್ವೇಷ ಭಾಷಣಕಾರರ ಮೇಲಿನ ಪ್ರಕರಣವನ್ನು ವಾಪಸ್ ಪಡೆದಿರುವುದು ದುರ ದೃಷ್ಟಕರ ಎಂದರು. ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ಮಾತನಾಡಿದರು.

ರಾಜ್ಯ ಸಮಿತಿ ಸದಸ್ಯ ಅಶ್ರಫ್ ಅಗ್ನಾಡಿ, ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ, ಕಾರ್ಯದರ್ಶಿ ನಿಸಾರ್ ವಲವೂರು, ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು, ಅಶ್ರಫ್ ತಲಪಾಡಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-29-168324704

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.