ಮಂಗಳೂರು: ಪ್ರೀತಿಸುವ ನೆಪದಲ್ಲಿ ಬಾಲಕಿ ಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ, ₹30 ಸಾವಿರ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಎಫ್ಟಿಎಸ್ಸಿ–2 (ಪೋಕ್ಸೊ) ಆದೇಶಿಸಿದೆ.

ಗದಗ ಜಿಲ್ಲೆ ರೋಣ ತಾಲ್ಲೂಕಿನ ಹೊಳೆ ಮುನ್ನೂರು ನಿವಾಸಿ ಮಹೇಶ ಮಾದರ (20) ಶಿಕ್ಷೆಗೊಳಗಾದ ಅಪರಾಧಿ.

ಘಟನೆ ವಿವರ: ಸಂತ್ರಸ್ತ ಬಾಲಕಿಯು ನಗರದ ಹೊರವಲಯದಲ್ಲಿ ತಂದೆ– ತಾಯಿಯೊಂದಿಗೆ ವಾಸವಿದ್ದಳು. ಪಕ್ಕದ ಮನೆಯಲ್ಲಿ ವಾಸವಿದ್ದ ಮಹೇಶ, ಬಾಲಕಿಗೆ ಪರಿಚಯವಾಗಿದ್ದು, ಇಬ್ಬರೂ ಪ್ರೀತಿಸುತ್ತಿದ್ದರು. ಈ ವಿಷಯ ತಿಳಿದ ಪಾಲಕರು ಮಗಳಿಗೆ ಬುದ್ಧಿವಾದ ಹೇಳಿ ಆತನಿಂದ ದೂರ ಇರುವಂತೆ ಹೇಳಿ, ಆಕೆ ಕೆಲಸಕ್ಕೆ ಹೋಗುವುದನ್ನು ತಡೆದಿದ್ದರು. ಆದರೆ, ಬಾಲಕಿ ಕೆಲಸಕ್ಕೆ ಹೋಗುವುದಾಗಿ ಹಟ ಹಿಡಿದು ಪುನಃ ಕೆಲಸಕ್ಕೆ ಹೋಗಲು ಪ್ರಾರಂಭಿಸಿದ್ದಳು. ಈ ವೇಳೆ ಕರೆ ಮಾಡಿದ ಮಹೇಶ ಆಕೆಯನ್ನು ಕರೆದುಕೊಂಡು ಹೋಗಿದ್ದು, ಇಬ್ಬರೂ ಒಟ್ಟಿಗೆ ಉಳಿದಿದ್ದರು. ಅಂದು ರಾತ್ರಿ ಆಕೆಯ ಮೇಲೆ ಆತ ಲೈಂಗಿಕ ದೌರ್ಜನ್ಯ ಎಸಗಿದ್ದ. ನಂತರವೂ ಹಲವಾರು ಬಾರಿ ದೌರ್ಜನ್ಯ ಎಸಗಿದ್ದ.

ಈ ಸಂಬಂಧ ಆಕೆ ಕೆಲಸ ಮಾಡುತ್ತಿದ್ದ ಸಂಸ್ಥೆಯವರು ನೀಡಿದ ದೂರಿನಂತೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಬ್ಬರನ್ನೂ ಪತ್ತೆ ಹಚ್ಚಿದ ಪೊಲೀಸರು, ಆತನ ವಿರುದ್ಧ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. 2015ರಲ್ಲಿ ಈ ಘಟನೆ ನಡೆದಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾ ಲಯ ಎಫ್ ಟಿಎಸ್ ಸಿ -2( ಪೋಕ್ಸೊ) ನ್ಯಾಯಾಲಯದ ನ್ಯಾಯಾ ಧೀಶರಾದ ಮಾನು ಕೆ.ಎಸ್, ಅಪರಾಧ ಸಾಬೀತಾಗಿರುವ ಹಿನ್ನೆಲೆ ಯಲ್ಲಿ ಅಪರಾಧಿಗೆ ಶಿಕ್ಷೆ ವಿಧಿಸಿ ಆದೇಶಿ ಸಿದ್ದಾರೆ. ಕಾನೂನು ಸೇವಾ ಪ್ರಾಧಿಕಾ ರದಿಂದ ₹3.65 ಲಕ್ಷ ಮೊತ್ತವನ್ನು ಸಂತ್ರಸ್ತೆಗೆ ಪಾವತಿಸಬೇಕು ಎಂದು ನಿರ್ದೇಶಿಸಿದ್ದಾರೆ. ಪೋಕ್ಸೊ ವಿಶೇಷ ಸರ್ಕಾರಿ ವಕೀಲೆ ಸಹನಾದೇವಿ ಬೋಳೂ ರು ಸರ್ಕಾರದ ಪರ ವಾದ ಮಂಡಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-29-1856468152

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.