ಮಂಗಳೂರು: ನಗರದ ಬೀದಿಬದಿಯಲ್ಲಿ ವ್ಯಾಪಾರ ಮಾಡುವವರನ್ನು ನಿಂದಿಸುವ ಮತ್ತು ಅಪರಾಧಿಗಳಂತೆ ಬಿಂಬಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುವ ಕೃತ್ಯಗಳು ನಡೆಯುತ್ತಿದ್ದು ಹಾಗೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ ಗೌರವ ಅಧ್ಯಕ್ಷ ಬಿ.ಕೆ ಇಮ್ತಿಯಾಜ್ ಆಗ್ರಹಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪುರಭವನ ಬಳಿ ಹಳೆಯ ಬಟ್ಟೆಗಳನ್ನು ಮಾರಾಟ ಮಾಡುವವರನ್ನು ಮೈಸೂರಿನಿಂದ ಬಂದವರು ಎಂದು ನಿಂದಿಸಲಾಗಿದೆ. ಅನುಮತಿ ಇಲ್ಲದೆ ವ್ಯಾಪಾರ ಮಾಡುತ್ತಾರೆ ಎಂದು ಹೇಳಿ ಸುಳ್ಳು ದೂರು ದಾಖಲಿಸಲಾಗಿದೆ ಎಂದು ಹೇಳಿದರು.

ಬೀದಿಬದಿ ವ್ಯಾಪಾರಿಗಳ ಜೀವನೋಪಾಯ ಸಂರಕ್ಷಣೆ ಮತ್ತು ನಿಯಂತ್ರಣ ಕಾಯ್ದೆ ಪ್ರಕಾರ ಬೀದಿಬದಿ ವ್ಯಾಪಾರಿಗಳು ಪ್ರಮಾಣಪತ್ರ ಮತ್ತು ಗುರುತಿನ ಚೀಟಿ ಪಡೆಯಲು ಅರ್ಜಿ ಸಲ್ಲಿಸಲಾಗುವುದಿಲ್ಲ. ನಗರಪಾಲಿಕೆ ಸಮೀಕ್ಷೆ ನಡೆಸಿ ಪ್ರಮಾಣ ಪತ್ರ, ಕಾರ್ಡ್ ನೀಡಬೇಕು. ಕಾನೂನು ಜಾರಿ ಮಾಡದ ನಗರಪಾಲಿಕೆ ತಪ್ಪನ್ನು ವ್ಯಾಪಾ ರಿಗಳ ಮೇಲೆ ಹೊರಿಸುವುದು ಸರಿಯಲ್ಲ ಎಂದರು.

ಸಂತೋಷ್, ಸುನಿಲ್ ಕುಮಾರ್ ಬಜಾಲ್, ಮುಜಾಫರ್ ಅಹ್ಮದ್, ಎಂ.ಎನ್ ಶಿವಪ್ಪ, ಮುತ್ತುರಾಜ್, ಹಂಝ ಮೊಹಮ್ಮದ್, ವಿಜಯ್ ಜೈನ್, ಅಬ್ದುಲ್ ಖಾದರ್ ವಾಮಂಜೂರು, ಗುಡ್ಡಪ್ಪ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-29-552428056

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.