ಮಂಗಳೂರು: ನಿಷೇಧಿತ ಮಾದಕ ಪದಾರ್ಥ ಗಾಂಜಾ ಸೇವನೆ ಮಾಡಿದ ಆರೋಪದ ಮೇಲೆ ನಗರದ ನರ್ಸಿಂಗ್ ಕಾಲೇಜೊಂದರ ಐವರು ವಿದ್ಯಾರ್ಥಿಗಳ ವಿರುದ್ಧ ಉರ್ವ ಠಾಣೆಯಲ್ಲಿ ಎನ್ಡಿಪಿ ಎಸ್ ಕಾಯ್ದೆಯಡಿ ಎಫ್ಐಆರ್ ದಾಖಲಾಗಿದೆ.

‘ಅಜಿಲ್ ನಾಜಿ (21 ವರ್ಷ), ಸಾಜಿಲ್ ಅಬ್ದುಲ್ ಸಮದ್ (21), ಅಬು ಥಾಮಸ್ (23 ವರ್ಷ), ಮೆಲ್ಸನ್ ಟೆಲ್ಲಿಸ್ (19), ಅಶ್ವಿನ್ ಸಾಜಿ (20 ವರ್ಷ) ಗಾಂಜಾ ಸೇವನೆ ಮಾಡಿರುವ ಆರೋಪಿಗಳು. ಕೇರಳ ರಾಜ್ಯದ ಈ ವಿದ್ಯಾರ್ಥಿಗಳು ನಗರದಲ್ಲಿ ಪ್ರತ್ಯೇಕವಾಗಿ ಮನೆಯನ್ನು ಬಾಡಿಗೆಗೆ ಪಡೆದುಕೊಂಡು ವಾಸ್ತವ್ಯವಿದ್ದರು. ಚಿಲಿಂಬಿ ಮಲರಾಯ ದೈವಸ್ಥಾನದ ಸಮೀಪದ ಸ್ಟಿಂಗ್ ಫೀಲ್ಡ್ ಬಡಾವಣೆಯ ಬಳಿ ಗಾಂಜಾ ಸೇವಿಸುತ್ತಿದ್ದಾಗ ಈ ಐವರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳ ಪಡಿಸಲಾಗಿದೆ. ಅವರು ಗಾಂಜಾ ಸೇವನೆ ಮಾಡಿರುವುದು ಪರೀಕ್ಷೆಯಲ್ಲಿ ದೃಢ ಪಟ್ಟಿದೆ’ ಎಂದು ಪೊಲೀಸ್ ಕಮಿ ಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

‘ಸಂಬಂಧಪಟ್ಟ ನರ್ಸಿಂಗ್ ಕಾಲೇಜಿನ ಆಡಳಿತ ಮಂಡಳಿಗೆ ಈ ವಿದ್ಯಾರ್ಥಿಗಳ ಬಗ್ಗೆ ಮಾಹಿತಿ ನೀಡಲಾಗಿದೆ. ಅಗತ್ಯ ಸುಧಾರಣಾ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಮನೆಯನ್ನು ಬಾಡಿಗೆಗೆ ನೀಡಿದವರೂ, ಅದರಲ್ಲಿ ವಾಸ್ತವ್ಯ ಇರುವ ಯುವಕರ ಚಟುವಟಿಕೆ ಮೇಲೆ ನಿಗಾ ಇರಿಸಬೇಕು. ಈ ಬಗ್ಗೆ ಮನೆ ಮಾಲಿಕರಿಗೆ ಸೂಚಿಸಲಾಗಿದೆ’ ಎಂದು ಕಮಿಷನರ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-29-1336619034

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.