ಮಂಗಳೂರು: ಮುಂಬರುವ ಆಗಸ್ಟ್ 21, 22 ಮತ್ತು 23ರಂದು ಸುಪ್ರೀಂ ಕೋರ್ಟಿನಲ್ಲಿ ‘ಸಮಾಧಾನ ಸಮಾರೋಹ- 2026’ ವಿಶೇಷ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಜನರು ಸುಪ್ರೀಂ ಕೋರ್ಟ್ ಮುಂದಿರುವ ತಮ್ಮ ವ್ಯಾಜ್ಯಗಳನ್ನು ಇಲ್ಲಿಂದಲೇ ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲಿಕ್ಕೆ ಇದೊಂದು ಸದವಕಾಶ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಸವರಾಜ್ ತಿಳಿಸಿದರು.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳ ವಾರ ಈ ಕುರಿತು ಮಾಹಿತಿ ನೀಡಿದ ಅವರು, ‘ಕಾನೂನು ಸೇವಾ ಸಮಿತಿ ವ್ಯಾಪ್ತಿಯಲ್ಲಿ ವ್ಯಾಜ್ಯಗಳು ಇತ್ಯರ್ಥಕ್ಕೆ ಬಾಕಿ ಇದ್ದಲ್ಲಿ ನೋಟಿಸ್ ಜಾರಿ ಮಾಡಿ ಸೂಕ್ತ ಮಧ್ಯಸ್ಥಿಕೆದಾರರನ್ನು ನೇಮಿಸಿ ಮಧ್ಯಸ್ಥಿಕೆಗೆ ಸ್ಥಳಾವಕಾಶವನ್ನು ಒದಗಿಸಿಕೊಡಲಾಗುತ್ತದೆ. ಪಕ್ಷಗಾರರಿಗೆ ಸುಪ್ರೀಂ ಕೋರ್ಟಿನಲ್ಲಿ ಬಾಕಿ ಇರುವ ತಮ್ಮ ವ್ಯಾಜ್ಯಗಳ ರಾಜಿ ಬಗ್ಗೆ ಯಾವುದೇ ಅನುಮಾನ ಇದ್ದರೆ ಸ್ಥಳೀಯ ತಾಲ್ಲೂಕು ಕಾನೂನು ಸೇವಾ ಸಮಿತಿ ಅಥವಾ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವನ್ನು ಸಂಪರ್ಕಿಸಬಹುದು’ ಎಂದರು.

‘ದಕ್ಷಿಣ ಕನ್ನಡ ಜಿಲ್ಲೆಯ 43 ವ್ಯಾಜ್ಯಗಳೂ ಸೇರಿ ನಮ್ಮ ರಾಜ್ಯಕ್ಕೆ ಸಂಬಂಧಿಸಿದ 4,328 ವ್ಯಾಜ್ಯಗಳನ್ನು ಸುಪ್ರೀಂ ಕೋರ್ಟ್ನಲ್ಲಿ ಸಮಾಧಾನ ಸಮಾರೋಹದ ಮೂಲಕ ಇತ್ಯರ್ಥಪಡಿಸಲು ಗುರುತಿಸಲಾಗಿದೆ. ನಮ್ಮ ಜಿಲ್ಲೆಯ ಪ್ರಕರಣಗಳಿಗೆ ಸಂಬಂಧಿಸಿ ಆಯಾ ತಾಲ್ಲೂಕುಗಳಿಗೆ ನೋಟಿಸ್ ಕಳುಹಿಸಲಾಗುತ್ತದೆ. ಅಗತ್ಯ ಬಿದ್ದರೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಂಧಾನಕ್ಕೆ ಹಾಜರಾಗಲು ವ್ಯವಸ್ಥೆ ಕಲ್ಪಿಸಲಿದ್ದೇವೆ. ಈ ಕುರಿತ ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಪಡೆದುಕೊಳ್ಳಬಹುದು’ ಎಂದು ಅವರು ವಿವರಿಸಿದರು.

ವಿಶೇಷ ಲೋಕ ಅದಾಲತ್: ಜುಲೈ 18 ಮತ್ತು ನ.21ರಂದು ವಿಶೇಷ ಅದಾಲತ್ ಹಮ್ಮಿಕೊಳ್ಳಲಾಗುತ್ತದೆ. ಚೆಕ್ ಬೌನ್ಸ್ ವ್ಯಾಜ್ಯಗಳು, ಮೋಟಾರು ವಾಹನ ಕಾಯ್ದೆಗೆ ಸಂಬಂಧಿಸಿದ ವ್ಯಾಜ್ಯಗಳು, ಅಕ್ರಮ ಮರಳು ಸಾಗಣೆ, ಕಾರ್ಮಿಕ ನಷ್ಟ ಪರಿಹಾರ, ಗ್ರಾಹಕರ ವಿವಾದ, ವಿದ್ಯುತ್ ನೀರಿನ ಶುಲ್ಕ, ಪಿಂಚಣಿ ಪ್ರಮಾಣಪತ್ರ ಹಾಗೂ ಇತರ ರಾಜಿ ಆಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ವ್ಯಾಜ್ಯಗಳನ್ನು ಈ ಲೋಕ್ ಅದಾಲತ್ನಲ್ಲಿ ಇತ್ಯರ್ಥಪ ಡಿಸಿಕೊಳ್ಳ ಬಹುದು ಎಂದು ಅವರು ತಿಳಿಸಿದರು.

‘ಮಂಗಳೂರು, ಬಂಟ್ವಾಳ, ಪುತ್ತೂರು, ಮೂಡುಬಿದಿರೆ ಹಾಗೂ ಸುಳ್ಯ ನ್ಯಾಯಾಲಯಗಳಲ್ಲಿ ನ್ಯಾಯಾಧೀಶರು, ವಕೀಲರು ಬೈಠಕ್ ಮೂಲಕ ರಾಜಿ ಸಭೆ ನಡೆಸಲಿದ್ದಾರೆ. ಈ ಬಗ್ಗೆ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ಎರಡೂ ಪಕ್ಷದವರಿಗೂ ಒಪ್ಪಿಗೆ ಆಗುವಂತೆ ಪ್ರಕರಣ ಬಗೆಹರಿಸಲಾಗುತ್ತದೆ. ನ್ಯಾಯಾಲಯಕ್ಕೆ ಅವರು ಪಾವತಿಸಿರುವ ಶುಲ್ಕ ಮರಳಿಸಲಾಗುತ್ತದೆ. ಈ ಲೋಕ್ ಅದಾಲತ್ನ ಆದೇಶದ ವಿರುದ್ಧದ ಮೇಲ್ಮನವಿಗೆ ಅವಕಾಶ ಇರುವುದಿಲ್ಲ’ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 13,357 ಚೆಕ್ ಬೌನ್ಸ್ ವ್ಯಾಜ್ಯಗಳು ಇತ್ಯರ್ಥಕ್ಕೆ ಬಾಕಿ ಇವೆ. ಪಕ್ಷಗಾರರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕಡಿಮೆ ಖರ್ಚಿನಲ್ಲಿ ತ್ವರಿತನ್ಯಾಯ ಪಡೆದುಕೊಳ್ಳಬಹುದು ಎಂದು ಅವರು ತಿಳಿಸಿದರು.

‘ಮಾರ್ಚ್ ತಿಂಗಳಲ್ಲಿ ನಡೆದ ಈ ವರ್ಷದ ಮೊದಲ ಲೋಕ ಅದಾಲತ್ನಲ್ಲಿ 3197 ವ್ಯಾಜ್ಯಗಳನ್ನು ಇತ್ಯರ್ಥಪಡಿಸಲಾಗಿತ್ತು. ಒಟ್ಟು ₹19.96 ಕೋಟಿಗೆ ಸಂಬಂಧಿಸಿದ ವ್ಯಾಜ್ಯಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿತ್ತು’ ಎಂದು ದ.ಕ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿರುವ ನ್ಯಾಯಾಧೀಶರಾದ ಜೈಬುನ್ನೀಸಾ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-29-447211159

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.