ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎನ್‌ಐಟಿಕೆ ಹಳೆ ಗೇಟ್ ಬಳಿ ಚಲಿಸುತ್ತಿದ್ದ ಬಿಎಂಡಬ್ಲ್ಯು ಕಾರು ಗುರುವಾರ ಹಠಾತ್ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ.
ಈ ಕಾರು ಉಡುಪಿ ಜಿಲ್ಲೆಯ ಕುಂದಾಪುರದ ದಯಾನಂದ ಶೆಟ್ಟಿ ಅವರಿಗೆ ಸೇರಿದ್ದಾಗಿದೆ. ಅವರು ಮಂಗಳೂರಿಗೆ ಪ್ರಯಾಣಿಸುತ್ತಿದ್ದಾಗ ಎಂಜಿನ್‌ನಲ್ಲಿ ದೋಷ ಕಾಣಿಸಿಕೊಂಡು, ಬೆಂಕಿ ಹೊತ್ತಿಕೊಂಡಿತು.
ಕೆಲವೇ ನಿಮಿಷಗಳಲ್ಲಿ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.