ಶನಿವಾರ, ಸೆಪ್ಟೆಂಬರ್ 24, 2022
21 °C

ಸುರತ್ಕಲ್‌: ಕತ್ತಿ ಬೀಸಿ ಹುಚ್ಚಾಟ ನಡೆಸಿದ ಯುವಕ ಪೊಲೀಸ್ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ನಗರದ ಹೊರವಲಯದ ಸುರತ್ಕಲ್‌ ಸಮೀಪದ ಕಾನದಲ್ಲಿ ಕತ್ತಿ ಬೀಸಿ ಹುಚ್ಚಾಟ ನಡೆಸಿದ ಜಾರ್ಖಂಡ್ ಮೂಲದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅತುಲ್ ಕುಲ್ಲು (30) ಬಂಧಿತ ವ್ಯಕ್ತಿ.

ಗೋವಾದಿಂದ ಕಾಸರಗೋಡಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಈತ ಸುರತ್ಕಲ್ ರೈಲು ನಿಲ್ದಾಣದಲ್ಲಿ ಇಳಿದಿದ್ದು, ಸಾರ್ವಜನಿಕರ ಜತೆ ಒರಟಾಗಿ ವರ್ತಿಸಿದ್ದಾನೆ. ವೆಂಕಪ್ಪ ಎಂಬ ಸ್ಥಳೀಯ ವ್ಯಕ್ತಿಗೆ ಬೆದರಿಸಿ, ಆತನ ಬಳಿ ಇರುವ ಕತ್ತಿಯನ್ನು ತೆಗೆದುಕೊಂಡು, ಅದನ್ನು ಬೀಸುತ್ತ ಜನರಲ್ಲಿ ಭಯ ಮೂಡಿಸಿದ್ದಾನೆ. ಗ್ಯಾರೇಜ್ ನಡೆಸುತ್ತಿದ್ದ ಇಮ್ರಾನ್ ಎಂಬ ವ್ಯಕ್ತಿಗೆ ಕತ್ತಿ ತಾಗಿ ಸಣ್ಣಪುಟ್ಟ ಗಾಯಗಳಾಗಿವೆ.

ಸಾರ್ವಜನಿಕರು ಅತುಲ್‌ನನ್ನು ಹಿಡಿದು ಆತನಿಗೆ ಏಟು ಹಾಕಿದ್ದಾರೆ. ವ್ಯಕ್ತಿ ಮಾನಸಿಕ ಅಸ್ವಸ್ಥನ ರೀತಿ ವರ್ತಿಸುತ್ತಿದ್ದು, ಪೆಟ್ಟು ತಿಂದಿರುವ ಈತನನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದು, ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು