ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು ತಾಲ್ಲೂಕಿನ ಶಾಲೆಗಳಿಗೆ 4 ದಿನ ಹೆಚ್ಚುವರಿ ರಜೆ

Last Updated 24 ಸೆಪ್ಟೆಂಬರ್ 2022, 5:55 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಲ್ಕು ದಿನಗಳು ಹೆಚ್ಚುವರಿ ದಸರಾ ರಜೆಯನ್ನು ಘೋಷಣೆ ಮಾಡಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರಾಜ್ಯದ ಇತರ ಪ್ರದೇಶಗಳ ಶಾಲೆಗಳಿಗೆ ಅ.3ರಿಂದ 16ರವರೆಗೆ ದಸರಾ ರಜೆಯನ್ನು ನೀಡಿದೆ. ಜೊತೆಗೆ, ಮಂಗಳೂರು ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇದೇ 28ರಿಂದ ಅ.1ರವರೆಗೆ ಹೆಚ್ಚುವರಿಯಾಗಿ ನಾಲ್ಕು ದಿನಗಳ ರಜೆ ಘೋಷಿಸಲಾಗಿದೆ ಎಂದು ಇಲಾಖೆಯ ನಿರ್ದೇಶಕರು ಜ್ಞಾಪನ ಪತ್ರದಲ್ಲಿ ತಿಳಿಸಿದ್ದಾರೆ.

ಅ.2ರಂದು ಎಲ್ಲ ಶಾಲೆಗಳಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಕಡ್ಡಾಯವಾಗಿ ಆಚರಿಸಬೇಕು. ಹೆಚ್ಚುವರಿಯಾಗಿ ನೀಡಿರುವ ನಾಲ್ಕುದಿನಗಳ ರಜೆಯನ್ನು ನವೆಂಬರ್‌ ತಿಂಗಳಿನಲ್ಲಿ ನಾಲ್ಕು ಶನಿವಾರ ಪೂರ್ಣ ದಿನ ತರಗತಿ ನಡೆಸಿ ಹಾಗೂ ಎರಡು ಭಾನುವಾರ ಶಾಲಾ ಕೆಲಸದ ದಿನಗಳನ್ನು ನಡೆಸುವ ಮೂಲಕ ಸರಿದೂಗಿಸಬೇಕು ಎಂದು ಇಲಾಖೆಯ ನಿರ್ದೇಶಕರು ಸೂಚಿಸಿದ್ದಾರೆ.

ನವೆಂಬರ್‌ನಲ್ಲಿ ಎರಡು ಭಾನುವಾರ ತರಗತಿಗಳನ್ನು ನಡೆಸುವಾಗ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸ್ಪಷ್ಟನೆ ನೀಡಿದ್ದಾರೆ.

ಮಂಗಳೂರಿನ ಶಾಲಾ ಮಕ್ಕಳಿಗೆ ದಸರಾ ರಜೆಯನ್ನು ನವರಾತ್ರಿ ಹಬ್ಬದ ಸಂದರ್ಭದಲ್ಲಿಯೇ ನೀಡಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರಿಗೆ ಮನವಿ ಸಲ್ಲಿಸಿದ್ದರು. ಹಬ್ಬದ ಸಂದರ್ಭದಲ್ಲೇ ರಜೆ ನೀಡಿದ್ದಕ್ಕೆ ಶಿಕ್ಷಣ ಸಚಿವರಿಗೆಶಾಸಕ ವೇದವ್ಯಾಸ್ ಕಾಮತ್ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT