ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡ ‘ತೌಕ್ತೆ’ ಚಂಡಮಾರುತದ ಪರಿಣಾಮದಿಂದ ಕರಾವಳಿಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಬಿರುಸಿನ ಮಳೆ ಸುರಿಯುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನತೆ ತೊಂದರೆ ಅನುಭವಿಸುವಂತಾಯಿತು.

ವಾರಾಂತ್ಯ ಕರ್ಪ್ಯೂ ತೆರವುಗೊಳಿಸಿದ್ದರಿಂದ ಕಾರ್ಮಿಕರು ನಿರ್ಮಾಣ ಕಾಮಗಾರಿ ಸೇರಿದಂತೆ ವಿವಿಧ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ಸಿದ್ಧರಾಗಿದ್ದರೂ ಮಳೆಯಿಂದಾಗಿ ಹೊರಗೆ ಹೋಗದಂತಾಗಿದೆ. ಅಗತ್ಯ ವಸ್ತುಗಳ ಖರೀದಿಸಲಾಗದೆ ಜನರು ತತ್ತರಿಸಿದರು. ಜಿಲ್ಲೆಯ ನಗರ ಮತ್ತು ಗ್ರಾಮಾಂತರದಲ್ಲಿ ಭಾರಿ ಮಳೆಯಾಗಿದ್ದು, ಉಳ್ಳಾಲ ಸೇರಿದಂತೆ ಹಲವೆಡೆ ಕಡಲು ಪ್ರಕ್ಷುಬ್ಧವಾಗಿದೆ. ಅಲೆಗಳ ಆರ್ಭಟ ಹೆಚ್ಚಾಗಿದ್ದು, ಸಮುದ್ರ ತೀರದ ಜನರು ಆತಂಕ ಎದುರಿಸುವಂತಾಗಿದೆ.

ಇದನ್ನೂ ಓದಿ:PHOTOS | Tauktae Cyclone | ಮಂಗಳೂರಿನಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆ ...

ಮೀನುಗಾರರ ರಕ್ಷಣೆ:
ಎಂಜಿನ್ ವೈಫಲ್ಯದಿಂದ ಸಮುದ್ರದಲ್ಲಿ ಸಿಲುಕಿದ್ದ ಮೀನುಗಾರಿಕೆ ದೋಣಿಯ ಮೂವರು ಮೀನುಗಾರರನ್ನು ಕರಾವಳಿ ಕಾವಲು ಪಡೆ ರಕ್ಷಣೆ ಮಾಡಿದೆ.

ಕಣ್ಣೂರಿನಿಂದ 10 ನಾಟಿಕಲ್ ಮೈಲಿ ದೂರದಲ್ಲಿ ಬೋಟ್ ಕೆಟ್ಟು ನಿಂತಿತ್ತು. ಮಾಹಿತಿ ಪಡೆದ ಕರಾವಳಿ ಕಾವಲು ಪಡೆ ಸಿಬ್ಬಂದಿ, ವಿಕ್ರಮ್ ಹಡಗಿನೊಂದಿಗೆ ಕಾರ್ಯಾಚರಣೆ ನಡೆಸಿದ್ದಾರೆ. ಮೂವರನ್ನು ರಕ್ಷಿಸಲಾಗಿದ್ದು, ಅವರಿಗೆ ಆಹಾರ, ವೈದ್ಯಕೀಯ ನೆರವು ನೀಡಲಾಗಿದೆ ಎಂದು ಕರಾವಳಿ ಕಾವಲು ಪಡೆದ ಕಮಾಂಡರ್ ವೆಂಕಟೇಶ್ ತಿಳಿಸಿದ್ದಾರೆ.

ಮುರಿದು ಬಿದ್ದ ವಿದ್ಯುತ್ ಕಂಬ...
ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯ ನೀರುಮಾರ್ಗ-ಬಿ.ಸಿ.ರೋಡು ರಸ್ತೆಯಲ್ಲಿ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಕೆಲಕಾಲ ರಸ್ತೆ ಸಂಚಾರ ಬಂದ್ ಆಗಿತ್ತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.