ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು ವಿಶ್ವವಿದ್ಯಾಲಯ: ಕುಲಪತಿಯಾಗಿ ಪಿ.ಎಲ್‌. ಧರ್ಮ ಅಧಿಕಾರ ಸ್ವೀಕಾರ

Published 5 ಮಾರ್ಚ್ 2024, 15:54 IST
Last Updated 5 ಮಾರ್ಚ್ 2024, 15:54 IST
ಅಕ್ಷರ ಗಾತ್ರ

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ನೂತನ ಕುಲಪತಿ ಪ್ರೊ.ಪಿ.ಎಲ್‌.ಧರ್ಮ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.

ಪ್ರೊ. ಧರ್ಮ ಅವರು ವಿಶ್ವವಿದ್ಯಾಲಯದ 10ನೇ ಕುಲಪತಿಯಾಗಿದ್ದಾರೆ. ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ಹಾಗೂ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಈ ಹಿಂದೆ ಇದೇ ವಿಶ್ವದ್ಯಾಲಯದ ಕುಲಸಚಿವರಾಗಿಯೂ (ಮೌಲ್ಯಮಾಪನ) ಕರ್ತವ್ಯ ನಿರ್ವಹಿಸಿದ್ದರು.

ಅಧಿಕಾರ ಸ್ವೀಕರಿಸಿದ ದಿನದಿಂದ ನಾಲ್ಕು ವರ್ಷಗಳವರೆಗೆ ಅಥವಾ ಅವರಿಗೆ 67 ವರ್ಷ ಭರ್ತಿಯಾಗುವವರೆಗೆ, ಇವೆರಡಲ್ಲಿ ಯಾವುದು ಮೊದಲೋ ಆ ದಿನಾಂಕದವರೆಗೆ ಅವರು ಕುಲಪತಿಯಾಗಿ ಮುಂದುವರಿಯಲಿದ್ದಾರೆ ಎಂದು ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿರುವ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರು ಮಂಗಳವಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಕುಲಪತಿಯಾಗಿದ್ದ ಪ್ರೊ.ಪಿಎಸ್‌. ಯಡಪಡಿತ್ತಾಯ ಅವರ ಅವಧಿ 2023ರ ಜೂನ್‌ 2ಕ್ಕೆ ಕೊನೆಗೊಂಡಿತ್ತು. ಆ ಬಳಿ ವಿಶ್ವವಿದ್ಯಾಲಯದ ಅತ್ಯಂತ ಹಿರಿಯ ಡೀನ್‌ ಆಗಿದ್ದ ಪ್ರೊ.ಜಯರಾಜ್‌ ಅಮೀನ್‌ ಅವರನ್ನು ಹಂಗಾಮಿ ಕುಲಪತಿಯನ್ನಾಗಿ ನೇಮಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT