ಮಂಗಳೂರು: ಎಸ್ಎಂಎಸ್ ಕಳುಹಿಸಿ ಮೊಬೈಲ್ ಹ್ಯಾಕ್ ಮಾಡಿ ತಮ್ಮ ಖಾತೆಯಲ್ಲಿದ್ದ ₹ 6.91 ಲಕ್ಷ ಹಣವನ್ನು ಯುಪಿಐ ಮೂಲಕ ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿದ ಬಗ್ಗೆ ಸಂತ್ರಸ್ತ ವ್ಯಕ್ತಿ ದೂರು ನೀಡಿದ್ದು, ಕಾವೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

‘ನನ್ನ ಬ್ಯಾಂಕ್ ಖಾತೆಯಿಂದ ಬೇರೆ ಬೇರೆ ಖಾತೆಗಳಿಗೆ ಹಣ ವರ್ಗಾವಣೆ ಆದ ಕುರಿತು ಮೊಬೈಲ್ಗೆ ಮೇ 4ರಂದು ಸಂದೇಶಗಳು ಬಂದವು. ತಕ್ಷಣವೇ ಈ ಬಗ್ಗೆ 1930 ಸಹಾಯವಾಣಿಗೆ ದೂರನ್ನು ಸಲ್ಲಿಸಿದ್ದೆ. ನನ್ನ ಬ್ಯಾಂಕ್ ಖಾತೆಯ ವಹಿವಾಟಿನ ವಿವರಗಳನ್ನು ಅದೇ ದಿನ ಪರಿಶೀಲಿಸಿದಾಗ ಸುಮಾರು ₹ 3.77 ಲಕ್ಷವನ್ನು ಯುಪಿಐ ಮೂಲಕ ಏರ್ಟೆಲ್ ಪೇಮೆಂಟ್ ಬ್ಯಾಂಕಿನ ಖಾತೆಗೆ ಹಂತ ಹಂತವಾಗಿ ವರ್ಗಾಯಿಸಿದ್ದುದು ಗೊತ್ತಾಗಿದೆ. ನಾನು ಬೇರೆ ಬೇರೆ ಬ್ಯಾಂಕ್ಗಳಲ್ಲಿ ಹೊಂದಿರುವ ಇನ್ನೆರಡು ಖಾತೆಗಳಿಂದ ಏರ್ಟೆಲ್ ಪೇಮೆಂಟ್ ಬ್ಯಾಂಕಿಗೆ ಹಂತ ಹಂತವಾಗಿ ₹ 3.14 ಲಕ್ಷ ಏ. 8ರಂದು ವರ್ಗಾವಣೆಯಾಗಿರುವುದು ಕಂಡುಬಂದಿದೆ ಎಂದು ಸಂತ್ರಸ್ತ ವ್ಯಕ್ತಿ ದೂರಿನಲ್ಲಿ ಆರೋಪಿಸಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-29-1532102106

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.