ಮೂಲ್ಕಿ: ರಾಜ್ಯದಾದ್ಯಂತ ಮತದಾರರ ಪಟ್ಟಿಯ ಮ್ಯಾಪಿಂಗ್ ಬಹಳ ಬಿರುಸು ನಿಂದ ನಡೆಯುತ್ತಿದ್ದು, ಈ ಕಾರ್ಯ ಯಶಸ್ವಿಯಾಗಬೇಕಾದರೆ ಕಾಂಗ್ರೆಸ್ ಪಕ್ಷದ ಬಿಎಲ್ಎಗಳು ಸಕ್ರಿಯ ರಾಗಿ ಕೆಲಸ ಮಾಡಬೇಕು. ಈಗಾಗಲೇ ಶೇ 80ಕ್ಕಿಂತ ಕಡಿಮೆ ಪ್ರಗತಿ ಸಾಧಿಸಿರುವ ಬೂತ್ಗಳನ್ನು ಗುರುತಿಸಿ ಕೆಲಸ ಮಾಡಬೇಕು ಎಂದು ಮೂಲ್ಕಿ–ಮೂಡುಬಿದಿರೆ ಕ್ಷೇತ್ರದ ಮ್ಯಾಪಿಂಗ್ ಕಾರ್ಯದ ಕಾಂಗ್ರೆಸ್ ಉಸ್ತುವಾರಿ ಹಾಗೂ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಹೇಳಿದರು.

ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಸಮಿತಿ ನಡೆಸುವ ಪ್ರಜಾಪ್ರತಿನಿಧಿ ಅಧ್ಯಕ್ಷರ ಮತ್ತು ಉಸ್ತುವಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಕೆಪಿಸಿಸಿ ಸದಸ್ಯ ಎಚ್.ವಸಂತ ಬರ್ನಾಡ್ ಬೂತ್ವಾರು ಮಾಹಿತಿ ನೀಡಿ, ಬಿಎಲ್ಎಗಳು ಬಿಎಲ್ಒಗಳೊಂದಿಗೆ ಸಂಪರ್ಕ ಸಾಧಿಸಿದರೆ ಶೀಘ್ರಗತಿಯಲ್ಲಿ ಪ್ರಗತಿ ಸಾಧಿಸಲು ಸಾಧ್ಯವಿದೆ ಎಂದರು.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ತರಬೇತುದಾರೆ ಅಮಿತಾ ಮಾಹಿತಿ ನೀಡಿದರು. ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಿಲ್ಮಾ ಡಿಕೋಸ್ಟ ಭಾಗವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಮಂಜುನಾಥ ಕಂಬಾರ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-29-1360332940

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.