ಶುಕ್ರವಾರ, ಜನವರಿ 24, 2020
16 °C

ಮಂಗಳೂರು| ಪೊಲೀಸ್ ಭದ್ರತೆಯಲ್ಲಿ ಶವಪರೀಕ್ಷೆಗೆ ಅಂತಿಮ ಸಿದ್ಧತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ಸಂದರ್ಭ ನಡೆದ ಗೋಲೀಬಾರ್‌ನಲ್ಲಿ ಮೃತಪಟ್ಟ ನೌಸೀನ್ (23) ಮತ್ತು ಜಲೀಲ್ ಕುದ್ರೋಳಿ (49) ಅವರ ಶವಪರೀಕ್ಷೆಗೆ ಪೊಲೀಸರು ಎಲ್ಲ ಸಿದ್ಧತೆ ಮಾಡಿಕೊಂಡಿದ್ದಾರೆ.

ವೆನ್ಲಾಕ್ ಆಸ್ಪತ್ರೆಯ ಶವಪರೀಕ್ಷಾ ಕೊಠಡಿಗಳು ಮೃತದೇಹಗಳನ್ನು ಸ್ಥಳಾಂತರಿಸಲು ಸಿದ್ಧತೆಗಳು ನಡೆಯುತ್ತಿವೆ. ಆಸ್ಪತ್ರೆ ಸುತ್ತಮುತ್ತ ಬಿಗಿ ಬಂದೋಬಸ್ತ್ ಹಾಕಲಾಗಿದ್ದು ಎಲ್ಲೆಲ್ಲೂ ಖಾಕಿಧಾರಿಗಳೇ ಕಂಡು ಬರುತ್ತಿದ್ದಾರೆ.

ಶವಪರೀಕ್ಷೆಯ ನಂತರ ಮೃತದೇಹಗಳನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗುವುದು. ಅನಂತರ ಪೊಲೀಸ್ ಭದ್ರತೆಯಲ್ಲಿಯೇ ಅಂತ್ಯ ಸಂಸ್ಕಾರ ನೆರವೇರಿಸುವ ಸಾಧ್ಯತೆ ಬಗ್ಗೆಯೂ ಪೊಲೀಸರು ಚಿಂತನೆ ನಡೆಸಿದ್ದಾರೆ.

ಮಂಗಳೂರಿನಲ್ಲಿ ಕರ್ಫ್ಯೂ ಇರುವುದರಿಂದ ಜನಜೀವನ ಸ್ಥಗಿತಗೊಂಡಿದೆ. ಜನರು ರಸ್ತೆಗಳಲ್ಲಿ ಸಂಚರಿಸಲು ಪೊಲೀಸರು ಅವಕಾಶ ಕೊಡುತ್ತಿಲ್ಲ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು