ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ವಿಮಾನ ನಿಲ್ದಾಣ ರಸ್ತೆ ಸೇತುವೆಯ ಪಿಲ್ಲರ್ ಕುಸಿತ, ಸಂಚಾರ ಸ್ಥಗಿತ

Last Updated 15 ಜೂನ್ 2021, 3:52 IST
ಅಕ್ಷರ ಗಾತ್ರ

ಮಂಗಳೂರು: ಮಂಗಳೂರು ಹೊರವಲಯದ ಬಜ್ಪೆಯ ಮರವೂರು ಬಳಿ ವಿಮಾನ ನಿಲ್ದಾಣಕ್ಕೆ ತೆರಳುವ ರಸ್ತೆಯ ಸೇತುವೆಯ ಪಿಲ್ಲರ್ ಕುಸಿದ ಪರಿಣಾಮ ಸಂಚಾರ ಸ್ಥಗಿತಗೊಂಡಿದೆ.

ಹೊಸ ಸೇತುವೆ ಕಾಮಗಾರಿ ಹಿನ್ನೆಲೆಯಲ್ಲಿ ಒಂದೇ ಭಾಗದಲ್ಲಿ ನೀರಿನ ಹರಿವು ಹೆಚ್ಚಾಗಿತ್ತು. ಪರಿಣಾಮವಾಗಿ ಸೇತುವೆಯ ಪಿಲ್ಲರ್ ಕುಸಿದಿದ್ದು, ಸೇತುವೆಗೆ ಹಾನಿಯಾಗಿದೆ.

ಮಂಗಳೂರು ನಗರದಿಂದ ವಿಮಾನ ನಿಲ್ದಾಣಕ್ಕೆ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಉಡುಪಿಯಿಂದ ಬರುವವರು ಮೂಲ್ಕಿಯಲ್ಲಿ ತಿರುವು ಪಡೆದು ಕಿನ್ನಿಗೋಳಿ-ಕಟೀಲು ರಸ್ತೆಯಾಗಿ ವಿಮಾನ ನಿಲ್ದಾಣಕ್ಕೆ ತೆರಳುವಂತೆ ಪೊಲೀಸರು ಸೂಚಿಸಿದ್ದಾರೆ.

ಮಂಗಳೂರು ನಗರದಿಂದ ಬರುವವರು ನಂತೂರಿನಲ್ಲಿ ತಿರುವು ಪಡೆದು ಕುಲಶೇಖರ–ಗುರುಪುರ ರಸ್ತೆಯಾಗಿ ವಿಮಾನ ನಿಲ್ದಾಣಕ್ಕೆ ತೆರಳುವಂತೆ ಸೂಚಿಸಲಾಗಿದೆ.

ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT