ಗಾಂಜಾ ವಶ: ಒಬ್ಬನ ಬಂಧನ

6

ಗಾಂಜಾ ವಶ: ಒಬ್ಬನ ಬಂಧನ

Published:
Updated:

ಮಂಗಳೂರು: ಬಂಟ್ವಾಳ ತಾಲ್ಲೂಕು ಬಾಳೆಪುಣಿ ಗ್ರಾಮದ ಮುಡಿಪು ನವಗ್ರಾಮದ ಬಳಿ ಸ್ಕೂಟರ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದ ಕೈರಂಗಳ ದರ್ಖಾಸು ಮನೆ ನಿವಾಸಿ ಮಹಮ್ಮದ್ ಇಕ್ಬಾಲ್‌ ಎಂಬಾತನನ್ನು ಗುರುವಾರ ಬಂಧಿಸಿರುವ ಕೊಣಾಜೆ ಠಾಣೆ ಪೊಲೀಸರು, ಆತನಿಂದ 680 ಗ್ರಾಂ ಗಾಂಜಾ ಮತ್ತು ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.

ಪೊಲೀಸ್ ವಾಹನ ಕಂಡು ತಪ್ಪಿಸಿಕೊಂಡು ಹೋಗಲು ಯತ್ನಿಸಿದ ಇಕ್ಬಾಲ್‌ನನ್ನು ಹಿಡಿದು ತಪಾಸಣೆ ನಡೆಸಿದಾಗ ಆತನ ಬಳಿ ಗಾಂಜಾ ಪತ್ತೆಯಾಯಿತು. ಮೀಯಪದವು ನಿವಾಸಿ ಅರ್ಷದ್‌ ಎಂಬಾತನಿಂದ ಗಾಂಜಾ ಖರೀದಿಸಿದ್ದು, ಯುವಕರಿಗೆ ಮಾರಾಟ ಮಾಡಲು ಹೋಗುತ್ತಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಣಾಜೆ ಠಾಣೆ ಇನ್‌ಸ್ಪೆಕ್ಟರ್‌ ಅಶೋಕ್‌, ಸಬ್‌ ಇನ್‌ಸ್ಪೆಕ್ಟರ್‌ ರವಿ ಪಿ.ಪವಾರ್, ಕಾನ್‌ಸ್ಟೆಬಲ್‌ಗಳಾದ ಅಶೋಕ್‌, ವಿಜಯ್, ಗಿರೀಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !