ಮಂಗಳವಾರ, 5 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆರೈನ್ ಟೆಕ್ನಿಕಲ್ ಎಂಜಿನಿಯರಿಂಗ್ ಕಾಲೇಜಿಗೆ ಒಪ್ಪಿಗೆ

ನಡ ಸರ್ಕಾರಿ ಪದವಿಪೂರ್ವ ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ
Last Updated 5 ಡಿಸೆಂಬರ್ 2022, 13:40 IST
ಅಕ್ಷರ ಗಾತ್ರ

ಬೆಳ್ತಂಗಡಿ: ‘ಓಡಿಲ್ನಾಳ ಗ್ರಾಮದ ರೇಷ್ಮರೋಡ್‌ನಲ್ಲಿ ಮೆರೈನ್ ಟೆಕ್ನಿಕಲ್ ಎಂಜಿನಿಯರಿಂಗ್ ಕಾಲೇಜು ಪ್ರಾರಂಭಿಸಲು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಒಪ್ಪಿಗೆ ಪಡೆಯಲಾಗಿದೆ’ ಎಂದು ಶಾಸಕ ಹರೀಶ್ ಪೂಂಜಾ ಹೇಳಿದರು.

ನಡ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ₹78 ಲಕ್ಷದಲ್ಲಿ ನಿರ್ಮಿಸಲಾದ ಕೊಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಬೆಳ್ತಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮತ್ತೆ ವಿಜ್ಞಾನ ವಿಭಾಗ ಆರಂಭಿಸಿದ್ದು, ಹೆಚ್ಚಿನ ವಿದ್ಯಾರ್ಥಿಗಳು ದಾಖಲಾತಿ ಹೊಂದಿದ್ದಾರೆ. ತಾಲ್ಲೂಕಿನ 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ಅಳವಡಿಸಲಾಗಿದೆ. ₹8 ಕೋಟಿ ವೆಚ್ಚದಲ್ಲಿ ಮೇಲoತಬೆಟ್ಟು ಹಾಗೂ ₹5.5 ಕೋಟಿ ವೆಚ್ಚದಲ್ಲಿ ಪೂಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ’ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಜಯ ಗೌಡ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ವಿವೇಕ್ ವಿನ್ಸೆoಟ್ ಪಾಯಸ್‌, ಜಯವಂತ್ ಪಟಗಾರ್, ಸುರೇಂದ್ರ, ರಾಜಶೇಖರ ಅಜ್ರಿ, ಮುನಿರಾಜ ಅಜ್ರಿ, ವಿಠ್ಠಲ ಶೆಟ್ಟಿ, ಅಜಿತ್ ಆರಿಗ, ಮುಖ್ಯಶಿಕ್ಷಕ ಯಾಕೂಬ್, ಪ್ರಾoಶುಪಾಲ ಚಂದ್ರಶೇಖರ್, ಉಪನ್ಯಾಸಕರಾದ ಮೋಹನ ಗೌಡ, ಲಿಲ್ಲಿ ಪಿ. ವಿ., ವಸಂತಿ ಪಿ., ಸುಕೇತ, ವಿದ್ಯಾ ಇದ್ದರು.

ಶಾಸಕರು ಮತ್ತು ಜಯರಾಮ ನಲ್ಕೆ ಅವರನ್ನು ಸನ್ಮಾನಿಸಲಾಯಿತು. ಅಂಗವಿಕಲ ವಿದ್ಯಾರ್ಥಿನಿ ಆಶಾ ಅವಳನ್ನು ಶಾಸಕರು ಸನ್ಮಾನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT