ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಉಚಿತ ಸಾಮೂಹಿಕ ವಿವಾಹ ನಾಳೆ

Published 27 ಡಿಸೆಂಬರ್ 2023, 7:55 IST
Last Updated 27 ಡಿಸೆಂಬರ್ 2023, 7:55 IST
ಅಕ್ಷರ ಗಾತ್ರ

ಮಂಗಳೂರು: ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್‌ನ ಮಂಗಳೂರು ವಲಯ, ನಗರದ ಅರಸು ಫ್ರೆಂಡ್ಸ್ ಬಳಗ, ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣದ ದಕ್ಷಿಣ ಕನ್ನಡ ಜಿಲ್ಲಾ ಘಟಕ ಮತ್ತು ಅಳಕೆ ಫ್ರೆಂಡ್ಸ್ ನೇತೃತ್ವದಲ್ಲಿಇದೇ 28ರಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ಉಚಿತ ಸಾಮೂಹಿಕ ವಿವಾಹ ಹಾಗೂ 3 ಬಡ ಕುಟುಂಬಗಳಿಗೆ ಮನೆ  ಹಸ್ತಾಂತರ ಕಾರ್ಯಕ್ರಮ ಏರ್ಪಡಿಸಲಾಗಿದೆ. 

‘ಅಳಕೆಯಿಂದ ಕುದ್ರೋಳಿ ದೇವಸ್ಥಾನದವರೆಗೆ ಬೆಳಗ್ಗೆ 9ಕ್ಕೆ ವಧು-ವರರ ದಿಬ್ಬಣ ನಡೆಯಲಿದೆ. ಮಧ್ಯಾಹ್ನ 12.20ರ ಮೀನಲಗ್ನದಲ್ಲಿ  ವಿವಾಹ ನೆರವೇರಲಿದೆ. ಈ ಪ್ರಯುಕ್ತ ಬೆಳಿಗ್ಗೆ 10ರಿಂದ ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು ಗುರುಪುರ ವಜ್ರದೇಹಿಮಠದ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ದೀಪಕ್ ಜಿ. ಬೆಳ್ತಂಗಡಿ, ಉದ್ಯಮಿ ಕಿರಣ್ ಚಂದ್ರ ಧರ್ಮಸ್ಥಳ, ಸಾಮಾಜಿಕ ಕಾರ್ಯಕರ್ತ ಸಿ.ಕೆ ಮೌಲ ಶರೀಫ್, ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ಹರೀಶ್ ಪೂಂಜ, ವೇದವ್ಯಾಸ ಕಾಮತ್, ಕುದ್ರೋಳಿ ಕ್ಷೇತ್ರದ ಆಡಲಿತ ಮಂಡಳಿ ಅಧ್ಯಕ್ಷ ಸಾಯಿರಾಮ್,  ಖಜಾಂಚಿ ಪದ್ಮರಾಜ್ ಆರ್‌., ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ್ ಮೂಡಬಿದಿರೆ ಮತ್ತಿತರರು  ಭಾಗವಹಿಸುವರು’ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT