ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸ್ವಾತಂತ್ರ್ಯ ರಕ್ಷಣೆಗಾಗಿ ಸಾಮೂಹಿಕ ಧರಣಿ

Published 15 ಆಗಸ್ಟ್ 2024, 3:04 IST
Last Updated 15 ಆಗಸ್ಟ್ 2024, 3:04 IST
ಅಕ್ಷರ ಗಾತ್ರ

ಮಂಗಳೂರು: ದೇಶದ ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಸಂವಿಧಾನದ ಸಂರಕ್ಷಣೆಗಾಗಿ, ಕಾರ್ಮಿಕ ವರ್ಗದ ಹಕ್ಕುಗಳ ಉಳಿವಿಗಾಗಿ ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ನಗರದಲ್ಲಿ ಬುಧವಾರ  ಸಾಮೂಹಿಕ ಧರಣಿ ನಡೆಯಿತು.

‘ಕಾರ್ಪೊರೇಟ್ ಪರ ನೀತಿಗಳನ್ನು ಹಿಮ್ಮೆಟ್ಟಿಸಿ ದೇಶವನ್ನು ಉಳಸಿ, ಜನತೆಯ ಬದುಕನ್ನು ರಕ್ಷಿಸಿ’ ಎಂದು ಧರಣಿ ನಿರತರು ಘೋಷಣೆ ಕೂಗಿದರು. 

ಧರಣಿ ಸತ್ಯಾಗ್ರಹವನ್ನು ಉದ್ಘಾಟಿಸಿದ ಸಿಐಟಿಯು ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಜೆ.ಬಾಲಕೃಷ್ಣ ಶೆಟ್ಟಿ, ‘ಕಾರ್ಮಿಕ ವರ್ಗ ಹಾಗೂ ಜನಸಾಮಾನ್ಯರ ಬದುಕು ತೀವ್ರ ಸಂಕಷ್ಟದಲ್ಲಿದೆ.  ಆಳುವ ವರ್ಗ ಪ್ರಜ್ಞಾಪೂರ್ವಕವಾಗಿ ಕಾರ್ಪೊರೇಟ್ ಪರ ನೀತಿಗಳನ್ನು ಜಾರಿಗೊಳಿಸುವ ಮೂಲಕ ಉಳ್ಳವರ ಹಿತ ಕಾಪಾಡಲು ತುದಿಗಾಲಲ್ಲಿ ನಿಂತಿದೆ’ ಎಂದರು.

ಸಿಐಟಿಯು ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ರೈತ ಸಂಘಟನೆಯ ಮುಖಂಡ ಕೆ.ಯಾದವ ಶೆಟ್ಟಿ, ಕಾರ್ಮಿಕ ನಾಯಕ ಬಿ.ಎಂ.ಭಟ್, ಸುಕುಮಾರ್ ತೊಕ್ಕೊಟ್ಟು, ಡಿವೈಎಫ್‌ಐ ರಾಜ್ಯ ಘಟಕದ ಅಧ್ಯಕ್ಷ ಮುನೀರ್ ಕಾಟಿಪಳ್ಳ, ಮಹಿಳಾ ಮುಖಂಡರಾದ ಜಯಂತಿ ಶೆಟ್ಟಿ, ಬ್ಯಾಂಕ್ ನೌಕರರ ಮುಖಂಡ ಬಿ.ಎಂ.ಮಾಧವ ಮುಂತಾದವರು ಮಾತನಾಡಿದರು.

ಪ್ರತಿಭಟನೆಯಲ್ಲಿ ಸಿಐಟಿಯು ಮುಖಂಡರಾದ ಯೋಗೀಶ್ ಜಪ್ಪಿನಮೊಗರು, ಪದ್ಮಾವತಿ ಶೆಟ್ಟಿ, ಸುಂದರ ಕುಂಪಲ, ರೋಹಿದಾಸ್, ರವಿಚಂದ್ರ ಕೊಂಚಾಡಿ, ವಸಂತಿ, ಈಶ್ವರಿ, ರೈತ ನಾಯಕರಾದ ಸದಾಶಿವದಾಸ್, ಕೃಷ್ಣಪ್ಪ ಸಾಲ್ಯಾನ್, ಡಿವೈಎಫ್‌ಐ ಪ್ರಮುಖರಾದ  ಸಂತೋಷ್ ಬಜಾಲ್, ನವೀನ್ ಕೊಂಚಾಡಿ, ರಿಜ್ವಾನ್ ಹರೇಕಳ, ವಿದ್ಯಾರ್ಥಿ ನಾಯಕರಾದ ವಿನುಷಾ, ರಮಣ, ಸಾಮಾಜಿಕ  ಕಾರ್ಯಕರ್ತರಾದ ಫ್ಲೇವಿ ಕ್ರಾಸ್ತಾ ಅತ್ತಾವರ, ಮೀನಾ ಟೆಲ್ಲಿಸ್, ಬಿ.ಎನ್.ದೇವಾಡಿಗ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT