ಮಂಗಳವಾರ, 20 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರ್ಮಸ್ಥಳ: ಮೇ 1ರಂದು ಸಾಮೂಹಿಕ ವಿವಾಹ

Published 28 ಜನವರಿ 2024, 15:28 IST
Last Updated 28 ಜನವರಿ 2024, 15:28 IST
ಅಕ್ಷರ ಗಾತ್ರ

ಉಜಿರೆ: 2024ರ ಮೇ 1ರಂದು ಸಂಜೆ 6.45ರ ಗೋಧೂಳಿ ಲಗ್ನದಲ್ಲಿ ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದೆ.

ದೇವಸ್ಥಾನದ ವತಿಯಿಂದ ವರನಿಗೆ ಧೋತಿ, ಶಾಲು, ವಧುವಿಗೆ ಸೀರೆ, ರವಿಕೆ ಕಣ ಮತ್ತು ಮಂಗಳಸೂತ್ರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶ ಇಲ್ಲ. ಉಚಿತ ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏ.20ರೊಳಗೆ ಮಾಹಿತಿ ಮತ್ತು ಸೂಕ್ತ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಬಹುದು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹದಲ್ಲಿ ಕಳೆದ ವರ್ಷದವರೆಗೆ 12,777 ಜೋಡಿ ದಾಂಪತ್ಯಕ್ಕೆ ಕಾಲಿರಿಸಿದ್ದಾರೆ.

ಮಾಹಿತಿಗಾಗಿ ದೂ: 08256 266644, 9663464648, 8147263422 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT