ಬುಧವಾರ, ಏಪ್ರಿಲ್ 14, 2021
24 °C

ಮಂಗಳೂರು: ಮಟ್ಕಾ ದಂಧೆಯಲ್ಲಿ ನಿರತರಾಗಿದ್ದ ಐವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮಟ್ಕಾ ದಂಧೆಗೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಮಟ್ಕ ದಂಧೆಯಲ್ಲಿ ನಿರತರಾಗಿದ್ದ ಐವರನ್ನು ಬಂಧಿಸಿದ್ದಾರೆ.

ನಂದನ್ ಎಸ್ ನಾಯ್ಕ್, ಪ್ರಶಾಂತ್, ಅನಿಲ್ ಕುಮಾರ್ ಬಂಗೇರಾ, ದಿನಕರ ಆಳ್ವಾ, ಅನಿಲ್ ಕುಮಾರ್ ಕಾವೂರು ಎಂಬವರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳಿಂದ ₹ 30,130 ನಗದು, ಹಾಗೂ 5 ಮೊಬೈಲ್ ಫೋನ್ ಸೇರಿದಂತೆ ಒಟ್ಟು ₹66,130 ಮೌಲ್ಯದ ವಸ್ತುಗಳನ್ನು, ಮಟ್ಕಾ ಬರೆಯುವ ಚೀಟಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಮಂಗಳೂರು ದಕ್ಷಿಣ, ಬರ್ಕೆ, ಮಂಗಳೂರು ಉತ್ತರ, ಕಾವೂರು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು