ಗುರುವಾರ , ಜೂನ್ 30, 2022
25 °C

ವೈದ್ಯಕೀಯ ವಿದ್ಯಾರ್ಥಿನಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸುಬ್ರಹ್ಮಣ್ಯ: ಕಡಬ ತಾಲ್ಲೂಕಿನ ವೈದ್ಯಕೀಯ ವಿದ್ಯಾರ್ಥಿನಿ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ನಿಧನರಾದರು.

ಕಡಬ ತಾಲ್ಲೂಕಿನ ಐನೆಕಿದು ಗ್ರಾಮದ ಕೂಜುಗೋಡು ಕಟ್ಟೆಮನೆ ಮನೆತನದ ಬೆಂಗಳೂರಿನ ಉದ್ಯಮಿ ದಿನೇಶ್ ಕೆ. ಅವರ ಪುತ್ರಿ ಪ್ರತೀಕ್ಷಾ (21) ನಿಧನರಾದರು. ಅವರಿಗೆ ತಂದೆ, ತಾಯಿ, ಸಹೋದರಿ, ಸಹೋದರ ಇದ್ದಾರೆ.

ಮಂಗಳೂರಿನ ಕಾಲೇಜೊಂದರಲ್ಲಿ ದ್ವಿತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿರುವ ಅವರು ಬೆಂಗಳೂರಿನಲ್ಲಿ ನೆಲೆಸಿದ್ದರು.

ಭಾನುವಾರ ರಾತ್ರಿ ರಕ್ತದೊತ್ತಡದಿಂದ ಕುಸಿತಕ್ಕೊಳಗಾದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು