ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡಗಬೆಳ್ಳೂರು ಶಾಲೆಗೆ ಎಂಸಿಎಫ್‌ನಿಂದ ಶೌಚಾಲಯ

Last Updated 7 ಜನವರಿ 2021, 4:37 IST
ಅಕ್ಷರ ಗಾತ್ರ

ಮಂಗಳೂರು: ಬಡಗಬೆಳ್ಳೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂದರ್ಭದಲ್ಲಿ ಎಂಸಿಎಫ್ ಸಂಸ್ಥೆಯು ತನ್ನ ಸಿಎಸ್‍ಆರ್ ಯೋಜನೆಯಡಿ ನಿರ್ಮಾಣ ಮಾಡಿಕೊಟ್ಟಿರುವ ಮೂರು ಶೌಚಾಲಯವನ್ನು ಶಾಲೆಗೆ ಹಸ್ತಾಂತರಿಸಲಾಯಿತು.

ಉದ್ಘಾಟಿಸಿ ಮಾತನಾಡಿದ ಎಂಸಿಎಫ್ ಮುಖ್ಯಮಹಾಪ್ರಬಂಧಕ ಗಿರೀಶ್, ಮೂಲಸೌಲಭ್ಯ ವಂಚಿತ ಗ್ರಾಮೀಣ ಶಾಲೆಗಳ ವಿದ್ಯಾರ್ಥಿಗಳ ಶುಚಿತ್ವಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ. ಈ ಉದ್ದೇಶದಿಂದ ಎಂಸಿಎಫ್ ಸಂಸ್ಥೆಯು ಸಿಎಸ್‍ಆರ್ ಯೋಜನೆಯಡಿ ಶಾಲೆಗಳಿಗೆ ಶೌಚಾಲಯ ನಿರ್ಮಾಣ ಮಾಡಿಕೊಡುವ ಯೋಜನೆಯನ್ನು ಹಲವು ವರ್ಷಗಳಿಂದ ಕೈಗೆತ್ತಿಕೊಂಡು ಬಂದಿದೆ. ಈ ಯೋಜನೆಯಡಿ ಬೆಳ್ಳೂರು ಶಾಲೆಗೆ ಶೌಚಾಲಯ ನಿರ್ಮಾಣ ಮಾಡಿಕೊಡಲಾಗಿದೆ ಎಂದು ತಿಳಿಸಿದರು.

ಶತಮಾನೋತ್ಸವ ಹಿನ್ನೆಲೆಯಲ್ಲಿ ಊರಿನ ಹಿರಿಯ, ಕಿರಿಯರು ಸೇರಿ ಶತಮಾನೋತ್ಸವ ಕಟ್ಟಡ ಸಮಿತಿ ರಚಿಸಲಾಗಿದ್ದು, ಈಗಾಗಲೇ ಶತಮಾನೋತ್ಸವ ಕಟ್ಟಡ ನಿರ್ಮಾಣ ಪ್ರಗತಿಯಲ್ಲಿದೆ.

ಕಟ್ಟಡ ಸಮಿತಿ ಅಧ್ಯಕ್ಷ ಪ.ರಮೇಶ್‌ಚಂದ್ರ ಭಂಡಾರಿ ಮಾತನಾಡಿ, ಬಡಗಬೆಳ್ಳೂರು ಸರ್ಕಾರಿ ಶಾಲೆಯನ್ನು ಮಾದರಿ ಶಾಲೆಯಾಗಿ ಪರಿವರ್ತಿಸುವ ಗುರಿಯನ್ನು ಶತಮಾನೋತ್ಸವ ಸಮಿತಿಯು ಕೈಗೆತ್ತಿಕೊಂಡಿದೆ. ಈಗಾಗಲೇ ಶತಮಾನೋತ್ಸವ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಯೋಜನೆಯನ್ನು ಪೂರ್ಣಗೊಳಿಸಿ, ಮಾದರಿ ಶಾಲೆಯಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಇನ್ನಷ್ಟು ಕೈ ಜೋಡಿಸಬೇಕಿದೆ ಎಂದು ಮನವಿ ಮಾಡಿದರು.

ಎಂಸಿಎಫ್‌ನ ಅಧಿಕಾರಿಗಳನ್ನು ಗೌರವಿಸಲಾಯಿತು. ಡಿಜಿಎಂ ಮೆಡಿಕಲ್ ಸರ್ವಿಸ್‌ನ ಯೋಗೀಶ್ ವೇದಿಕೆಯಲ್ಲಿದ್ದರು. ಕಾರ್ಯದರ್ಶಿ ಬಾಲಕೃಷ್ಣ ಕುಲಾಲ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಚ್ಚೀಂದ್ರನಾಥ ರೈ, ಕಾರ್ಯದರ್ಶಿ ವಿಶ್ವಂಬರ, ಎಂಸಿಎಫ್‌ನ ಜಗದೀಶ್ ಮತ್ತು ಪಿಆರ್‍ಒ ಅಭಿನಂದನ್ ಇದ್ದರು. ಸಂಚಾಲಕ ನರೇಂದ್ರನಾಥ ಭಂಡಾರಿ ಸ್ವಾಗತಿಸಿದರು. ಮುಖ್ಯೋಪಾಧ್ಯಾಯ ಕೇಶವ ವಂದಿಸಿದರು. ಶಿಕ್ಷಕಿ ದಿವ್ಯಾ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT