ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಗಳೂರು: ₹9 ಲಕ್ಷ ಮೌಲ್ಯದ ಎಂಡಿಎಂಎ ವಶ

Published 1 ಮೇ 2024, 16:15 IST
Last Updated 1 ಮೇ 2024, 16:15 IST
ಅಕ್ಷರ ಗಾತ್ರ

ಮಂಗಳೂರು: ನಗರದ ಕೋಟೆಕಾರ್ ಬೀರಿ ಬಳಿಯ ಮನೆಯೊಂದರಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿರುವ ಮಾಹಿತಿ ಪಡೆದ ಸಿಸಿಬಿ ಪೊಲೀಸರು, ದಾಳಿ ನಡೆಸಿ, ಇಬ್ಬರನ್ನು ಬಂಧಿಸುವ ಜೊತೆಗೆ ₹9 ಲಕ್ಷ ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.

ಉಳ್ಳಾಲ ನಿವಾಸಿ ಮೊಹಮ್ಮದ್ ಇಶಾನ್ (35), ಜಾಫರ್ ಸಾಧಿಕ್ (35) ಬಂಧಿತರು. ಆರೋಪಿತರು ಬೆಂಗಳೂರಿನಿಂದ ಮಾದಕ ವಸ್ತು ಖರೀದಿಸಿ ತಂದು, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸಿದ್ದರು. ಆರೋಪಿಗಳಿಂದ ಮೊಬೈಲ್ ಫೋನ್‌, 407 ಗ್ರಾಂ ಎಂಡಿಎಂಎ, ಡಿಜಿಟಲ್ ತೂಕ ಮಾಪಕ, ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಜಾಫರ್ ವಿರುದ್ಧ ಗಾಂಜಾ ಮಾರಾಟ, ಕೊಲೆಯತ್ನ, ಕೊಡಗು ಜಿಲ್ಲೆ ಕುಶಾಲನಗರ ಠಾಣೆಯಲ್ಲಿ ದರೋಡೆ ಪ್ರಕರಣ ಸೇರಿದಂತೆ ಒಟ್ಟು ಒಂಬತ್ತು ಪ್ರಕರಣಗಳು ದಾಖಲಾಗಿವೆ. ಮೊಹಮ್ಮದ್ ಇಶಾನ್ ಮೇಲೆ ಎಂಡಿಎಂಎ ಮಾರಾಟ ಪ್ರಕರಣ ಈ ಹಿಂದೆ ಕೊಣಾಜೆ ಠಾಣೆಯಲ್ಲಿ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ಸಿಸಿಬಿ ಘಟಕದ ಸಹಾಯಕ ಪೊಲೀಸ್ ಕಮಿಷನರ್ ಗೀತಾ ಕುಲಕರ್ಣಿ ನೇತೃತ್ವದಲ್ಲಿ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT