ಶುಕ್ರವಾರ, ಜುಲೈ 30, 2021
23 °C

ಅನುಮತಿ ಇಲ್ಲದೆ ಮೆಹಂದಿ ಕಾರ್ಯಕ್ರಮ: ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪದಡಿ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಅನುಮತಿ ಇಲ್ಲದೆ ಮೆಹಂದಿ ಕಾರ್ಯಕ್ರಮ ಆಯೋಜಿಸಿದವರ ವಿರುದ್ಧ ಕೋವಿಡ್-19 ನಿಯಮ ಉಲ್ಲಂಘಿಸಿದ ಆರೋಪದಡಿ ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿದೆ.

ಪಾವೂರಿನ ಶೋಭಾ ಎಂಬುವರು ಮೇ 20ರಂದು ಕೌಶಲ್ಯ ಅವರ ಮದುವೆಯ ಬಗ್ಗೆ ಪಂಚಾಯಿತಿಯಿಂದ ಷರತ್ತುಬದ್ಧ ಅನುಮತಿ ಪಡೆದಿದ್ದರು. ಆದರೆ, ಮೇ 19ರಂದು ರಾತ್ರಿ ಅನುಮತಿ ಇಲ್ಲದೆ ಮೆಹಂದಿ ಕಾರ್ಯಕ್ರಮ ಆಯೋಜಿಸಿದ್ದು, ಧ್ವನಿವರ್ಧಕ ಬಳಸಿ ಸುರಕ್ಷಿತ ಅಂತರ ಕಾಪಾಡದೆ, ಮಾಸ್ಕ್ ಧರಿಸದೆ ನೃತ್ಯ ಮಾಡುವ ಮೂಲಕ ಕೋವಿಡ್-19 ನಿಯಮ ಉಲ್ಲಂಘಿಸಿದ್ದಾರೆ ಎಂದು ಪಾವೂರು ಪಿಡಿಒ ಸುಧಾರಾಣಿ ದೂರು ನೀಡಿದ್ದಾರೆ.

ಕೊಣಾಜೆ ಪೊಲೀಸರು ಕರ್ನಾಟಕ ಸಾಂಕ್ರಾಮಿಕ ತಡೆ ಕಾಯ್ದೆ ಮತ್ತು ಕರ್ನಾಟಕ ಪೊಲೀಸ್ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು