ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಹಿತ್ಯ ಅಕಾಡೆಮಿ ಕೊಂಕಣಿ ಭಾಷಾ ಸಂಚಾಲಕರಾಗಿ ಮೆಲ್ವಿನ್ ರೊಡ್ರಿಗಸ್

Last Updated 11 ಮಾರ್ಚ್ 2023, 15:49 IST
ಅಕ್ಷರ ಗಾತ್ರ

ಮಂಗಳೂರು: ಕೊಂಕಣಿ ಕವಿ ಮೆಲ್ವಿನ್ ರಾಡ್ರಿಗಸ್ ನವದೆಹಲಿಯ ಸಾಹಿತ್ಯ ಅಕಾಡೆಮಿಯ ಕೊಂಕಣಿ ಸಲಹಾ ಮಂಡಳಿಯ ಸಂಚಾಲಕರಾಗಿ ಆಯ್ಕೆಯಾಗಿದ್ದಾರೆ. ಈ ಹುದ್ದೆಯ ಅವಧಿ ಐದು ವರ್ಷಗಳು.

ಕೊಂಕಣಿ ಕಾವ್ಯ ಕ್ಷೇತ್ರದ ಅಭಿವೃದ್ಧಿಯಲ್ಲಿ ಸಕ್ರಿಯ ಪಾತ್ರ ನಿರ್ವಹಿಸುತ್ತಿರುವ ಕವಿತಾ ಟ್ರಸ್ಟ್‌ನ ಸ್ಥಾಪಕರೂ ಆಗಿರುವ ಮೆಲ್ವಿನ್‌ ರಾಡ್ರಿಗಸ್‌ ಈ ವರೆಗೆ ಕೊಂಕಣಿ ಕಾವ್ಯಕ್ಕೆ ಸಂಬಂಧಿಸಿ ಸುಮಾರು 220 ಕಾರ್ಯಕ್ರಮಗಳನ್ನು ನಡೆಸಿದ್ದಾರೆ. ಆರು ಕವನ ಸಂಕಲನಗಳು, ಎರಡು ಪ್ರಬಂಧ ಸಂಕಲನಗಳು, ಕೊಂಕಣಿ ಹಾಡುಗಳ ಧ್ವನಿಸುರುಳಿ, ಭಾಷಾಂತರಗೊಂಡ ಮೂರು ಕೃತಿಗಳು, ಆರು ಸಂಪಾದಿತ ಕೃತಿಗಳು, ಒಂದು ನೀಳ್ಗತೆ ಸೇರಿ ಒಟ್ಟು 34 ಕೃತಿಗಳನ್ನು ಪ್ರಕಟಿಸಿದ್ದಾರೆ. ಅವರ ಸಾಹಿತ್ಯ ಕೃತಿಗಳಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ವಿಮಲಾ ವಿ. ಪೈ ವಿಶ್ವ ಕೊಂಕಣಿ ಕವಿತಾ ಕೃತಿ ಪುರಸ್ಕಾರ, ಮಣಿಪಾಲದ ಡಾ.ಟಿ.ಎಂ.ಎ. ಪೈ ಪುಸ್ತಕ ಪುರಸ್ಕಾರಗಳು ಒಲಿದಿವೆ.

ಗೋವಾದ ಕಾಣಕೋಣದಲ್ಲಿ 2019ರಲ್ಲಿ ನಡೆದ 24 ನೇ ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ್ಯತೆ ವಹಿಸಿದ್ದರು. ನಗರದ ವಿಶ್ವ ಕೊಂಕಣಿ ಕೇಂದ್ರದ ಕೊಂಕಣಿ ಭಾಷೆ ಮತ್ತು ಸಾಂಸ್ಕೃತಿಕ ಕೇಂದ್ರದ ವಿಶ್ವಸ್ಥರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಉದ್ಯಮ ನಿರ್ವಹಣೆಯಲ್ಲಿ ಸ್ನಾತಕ ಮತ್ತು ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರಾಗಿವ ಮೆಲ್ವಿನ್, ದೈಜಿವಲ್ಡ್ ಸಂಸ್ಥೆಯ ನಿರ್ದೇಶಕರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT