ಮಂಗಳೂರು: ಮೆಸ್ಕಾಂ ವ್ಯಾಪ್ತಿಯಲ್ಲಿ 465 ಹೊಸ ಲೈನ್ ಮೆನ್ಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಮೇ ಅಂತ್ಯದ ಒಳಗೆ ಲೈನ್ಮೆನ್ಗಳು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ಕುಮಾರ್ ಹೇಳಿದರು.

ಬುಧವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆ ಒಳಗೊಂಡಂತೆ 9,248 ಲೈನ್ಮೆನ್ಗಳ ಹುದ್ದೆ ಮಂಜೂರಾಗಿದ್ದು, ಪ್ರಸ್ತುತ 5,283 ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಉಳಿದ ಹುದ್ದೆಗಳು ಖಾಲಿ ಇವೆ. ಈಗಾಗಲೇ 400 ಮಂದಿಗೆ ವರ್ಗಾವಣೆ ಆಗಿದ್ದು, ಹೊಸದಾಗಿ ನೇಮಕಾತಿ ಆದವರು ಕರ್ತವ್ಯಕ್ಕೆ ಹಾಜರಾದ ಮೇಲೆ ಇವರನ್ನು ಬಿಡುಗಡೆಗೊಳಿಸಲಾಗುತ್ತದೆ ಎಂದರು.

ಮಳೆಗಾಲದ ವೇಳೆ ನೈಸರ್ಗಿಕ ವಿಕೋಪ ಸಂಭವಿಸಿದಲ್ಲಿ, ತಕ್ಷಣ ಸ್ಪಂದಿಸಲು ಹೆಚ್ಚುವರಿ ಸಿಬ್ಬಂದಿಯನ್ನು ತಾತ್ಕಾಲಿಕ ನೆಲೆಯಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಪ್ರತಿ ಕಿರಿಯ ಎಂಜಿನಿಯರ್ ಅಡಿಯಲ್ಲಿ ಐದು ಮಂದಿ ತಂಡ ಕಾರ್ಯ ನಿರ್ವಹಿಸುತ್ತದೆ. ಅವಘಡ ಸಂಭವಿಸಿದರೆ ಲೈನ್ಮೆನ್ಗಳ ಸಹಾಯಕರಾಗಿ ಅವರು ಕೆಲಸ ಮಾಡುತ್ತಾರೆ ಎಂದರು.

ಮೆಸ್ಕಾಂನಲ್ಲಿ ವಿದ್ಯುತ್ ವಿತರಕಗಳ ಕೊರತೆ ಇಲ್ಲ. 5,500 ಹೊಸ ವಿದ್ಯುತ್ ವಿತರಕ ಮಂಜೂರು ಆಗಿದ್ದು, ಮಳೆಗಾಲದಲ್ಲಿ ವಿದ್ಯುತ್ ವಿತರಕಗಳಲ್ಲಿ ಸಮಸ್ಯೆ ಎದು ರಾದರೆ ತಕ್ಷಣ ಬದಲಾಯಿಸಲು ಅನುಕೂಲವಾಗುತ್ತದೆ. ಜಿಲ್ಲೆಯಲ್ಲಿ ಸೋಲಾರ್ ಘಟಕಗಳ ಮೂಲಕ ವಿದ್ಯುತ್ ಉತ್ಪಾದಿಸಿ ಮೆಸ್ಕಾಂಗೆ ನೀಡುವವರ ಪ್ರಮಾಣ ಅತಿ ಕಡಿಮೆ ಇದೆ. ಸುಳ್ಯದ ಬೆಳ್ಳಾರೆ ಹಾಗೂ ಮಂಗಳೂರಿನಲ್ಲಿ ತಲಾ ಒಂದು ಸಂಸ್ಥೆ ಸೋಲಾರ್ ಘಟಕ ಅಳವಡಿಸಿ ವಿದ್ಯುತ್ ಉತ್ಪಾದಿಸಲು ಮುಂದೆ ಬಂದಿದೆ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-29-1911955328

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.