ಭಾನುವಾರ, ನವೆಂಬರ್ 28, 2021
20 °C

‘ನಿಗದಿತ ಅವಧಿಯಲ್ಲಿ ಕನಿಷ್ಠ ಕೂಲಿ ಪಾವತಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಪೌರ ಕಾರ್ಮಿಕರಿಗೆ ನಿಗದಿತ ಸಮಯದಲ್ಲಿ ಕನಿಷ್ಠ ಕೂಲಿ ಪಾವತಿಸಬೇಕು ಎಂದು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಶಿವಣ್ಣ, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.

ನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗುರುವಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು ಮತ್ತು ಮುಖಂಡರ ಜೊತೆ ಅವರು ಸಂವಾದ ನಡೆಸಿದರು. ‘ಗುತ್ತಿಗೆ ಕಾರ್ಮಿಕರಿಗೆ ಸಕಾಲದಲ್ಲಿ ವೇತನ ಪಾವತಿಯಾಗುತ್ತಿಲ್ಲ ಎಂಬ ದೂರುಗಳು ಇವೆ. ಪ್ರತಿ ತಿಂಗಳು 10ನೇ ತಾರೀಕಿನ ಒಳಗೆ ಅವರ ಬ್ಯಾಂಕ್‌ ಖಾತೆಗೆ ವೇತನದ ಮೊತ್ತ ಪಾವತಿಯಾಗಬೇಕು. ಗುತ್ತಿಗೆ ಕಂಪನಿಗಳು ನಿಯಮ ಪಾಲಿಸದಿದ್ದಲ್ಲಿ ಕಪ್ಪುಪಟ್ಟಿಗೆ ಸೇರಿಸಬೇಕು’ ಎಂದರು.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೊರ ಗುತ್ತಿಗೆಯಲ್ಲಿ ದುಡಿಯುತ್ತಿರುವ ಒಳಚರಂಡಿ ವಿಭಾಗದ ಕಾರ್ಮಿಕರನ್ನು ನೇರ ನೇಮಕಾತಿ ಮಾಡಬೇಕು ಅಥವಾ ಕಾಯಂ ಕಾರ್ಮಿಕರೆಂದು ಪರಿಗಣಿಸಬೇಕು ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಪ್ರಧಾನ ಸಂಚಾಲಕ ಜಗದೀಶ್ ಪಾಂಡೇಶ್ವರ ಮನವಿ ಮಾಡಿದರು.

ಆಯೋಗದ ಕಾರ್ಯದರ್ಶಿ ರಮಾ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಗಾಯತ್ರಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.