ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬುಲ್‌ಟ್ರಾಲ್, ಲೈಟ್ ಫಿಶಿಂಗ್ ವಿರುದ್ಧ ಕ್ರಮ-ಸಚಿವ ಶ್ರೀನಿವಾಸ ಪೂಜಾರಿ

ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ
Last Updated 6 ಅಕ್ಟೋಬರ್ 2019, 14:10 IST
ಅಕ್ಷರ ಗಾತ್ರ

ಮಂಗಳೂರು: ಬುಲ್‌ಟ್ರಾಲ್‌ ಮತ್ತು ಲೈಟ್‌ ಫಿಶಿಂಗ್‌ನಲ್ಲಿ ನಿರತರಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮೀನುಗಾರಿಕೆ, ಬಂದರು, ಮುಜರಾಯಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬುಲ್‌ಟ್ರಾಲ್‌ ಮತ್ತು ಲೈಟ್‌ ಫಿಶಿಂಗ್ ಅನ್ನು ನಿಷೇಧಿಸಲಾಗಿದೆ. ಇದು ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದರು.

ಕೆಲ ಮೀನುಗಾರರು ಈಗಲೂ ಬುಲ್‌ಟ್ರಾಲ್‌ ಮತ್ತು ಲೈಟ್ ಫಿಶಿಂಗ್‌ನಲ್ಲಿ ನಿರತರಾಗಿದ್ದಾರೆ. ಇದರಿಂದ ಸಾಂಪ್ರದಾಯಿಕ ಮೀನುಗಾರರಿಗೆ ಹೊಡೆತ ಬೀಳಲಿದೆ. ಸಾಂಪ್ರದಾಯಿಕ ಮೀನುಗಾರರ ಸಂಘದಿಂದ ಈಗಾಗಲೇ ಮನವಿ ಸಲ್ಲಿಸಲಾಗಿದೆ. ಅದಕ್ಕೆ ಅನುಗುಣವಾಗಿ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಆತಂಕ ಬೇಡ: ಪ್ರವಾಹದಲ್ಲಿ ಮನೆ, ಬೆಳೆ ಕಳೆದುಕೊಂಡಿರುವ ಸಂತ್ರಸ್ತರು ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡ. ರಾಜ್ಯ ಸರ್ಕಾರ ಅಗತ್ಯ ಪರಿಹಾರ ಒದಗಿಸಲು ಬದ್ಧವಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಮನೆ ಕಳೆದುಕೊಂಡವರಿಗೆ ತಲಾ ₹5 ಲಕ್ಷ ಒದಗಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ. ಅದರಂತೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮನೆ ಕಳೆದುಕೊಂಡವರಿಗೆ ₹5 ಲಕ್ಷ ಪರಿಹಾರವನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ. ಎಲ್ಲ ಸಂತ್ರಸ್ತರಿಗೂ ಪರಿಹಾರ ದೊರೆಯಲಿದೆ ಎಂದರು.ಪ್ರವಾಹದ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಕೃಷಿ ಜಮೀನಿನಲ್ಲಿ ಮಣ್ಣು ಆವರಿಸಿದೆ. ಈ ಮಣ್ಣನ್ನು ತೆರವುಗೊಳಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT