ಬುಧವಾರ, ಜೂನ್ 16, 2021
21 °C

ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪ್ರಾಧಿಕಾರ ಬಗ್ಗೆ ಶೀಘ್ರ ತೀರ್ಮಾನ: ಸಚಿವ ಕೋಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Kota Srinivasa poojari

ಸುಬ್ರಹ್ಮಣ್ಯ: ‘ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವ್ಯವಸ್ಥಾಪನಾ ಸಮಿತಿ ಬದಲು, ಪ್ರಾಧಿಕಾರ ರಚಿಸುವ ಬಗ್ಗೆ ಶೀಘ್ರವೇ  ತೀರ್ಮಾನಿಸಲಾಗುವುದು’ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಇಲ್ಲಿಗೆ ಸಮೀಪದ ಬಳ್ಪ ಗ್ರಾಮದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ‘ಪ್ರಾಧಿಕಾರ ರಚಿಸುವಂತೆ ಬೇಡಿಕೆಗಳು ಬಂದಿದ್ದು, ಪರಿಶೀಲಿಸಲಾಗುತ್ತಿದೆ’ ಎಂದರು.

‘ರಾಜ್ಯದ 80ಕ್ಕೂ ಅಧಿಕ ‘ಎ’ ದರ್ಜೆ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆಯ ಪ್ರಕ್ರಿಯೆಯು ಅಂತಿಮ ಹಂತದಲ್ಲಿದ್ದು, ವಾರದಲ್ಲಿ ಅಧಿಕೃತ ಪ್ರಕಟಣೆ ಹೊರಬೀಳಲಿದೆ’ ಎಂದರು. 

‘ದೇವಸ್ಥಾನಗಳಲ್ಲಿ ಸೇವೆಗಳನ್ನು ಆರಂಭಿಸುವ ಬಗ್ಗೆ ಆರೋಗ್ಯ ಇಲಾಖೆ ಜೊತೆ ಚರ್ಚಿಸಲಾಗುವುದು. ಈ ಬಾರಿ ಸಾರ್ವಜನಿಕ  ಗಣೇಶೋತ್ಸವ ಆಚರಣೆಗೆ ಅವಕಾಶವಿಲ್ಲ. ಆದರೆ, ದೇವಸ್ಥಾನಗಳಲ್ಲಿ ಆಚರಿಸುವ ಬಗ್ಗೆ ಚರ್ಚಿಸಿ, ತಿಳಿಸಲಾಗುವುದು’ ಎಂದು ಪ್ರಶ್ನೆಗಳಿಗೆ ಉತ್ತರಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು