ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆಲ, ಜಲ ಸಂರಕ್ಷಿಸುವ ಕೆಲಸ ಆಗಲಿ: ಸಚಿವ ಮಾಧುಸ್ವಾಮಿ

Last Updated 7 ಡಿಸೆಂಬರ್ 2019, 11:22 IST
ಅಕ್ಷರ ಗಾತ್ರ

ಉಪ್ಪಿನಂಗಡಿ: ‘ನೆಲ-ಜಲವನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸುವ ಕೆಲಸ ನಡೆಯಬೇಕು. ಅಂತರ್ಜಲವನ್ನು ಅಭಿವೃದ್ಧಿ ಪಡಿಸಬೇಕು’ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.

ಉಪ್ಪಿನಂಗಡಿ ಗ್ರಾಮದ ನಾಲಾಯಗುಂಡಿ ಎಂಬಲ್ಲಿ ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ಧಿ ಇಲಾಖೆಯ ವತಿಯಿಂದ ಕಿರು ಹೊಳೆಗೆ ₹1 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಕಿಂಡಿ ಅಣೆಕಟ್ಟೆಯನ್ನುಶನಿವಾರ ಉದ್ಘಾಟಿಸಿ, ಜಲಾಶಯಕ್ಕೆ ಬಾಗಿನ ಅರ್ಪಿಸಿ ಅವರು ಮಾತನಾಡಿದರು.

‘ಪಶ್ಚಿಮ ವಾಹಿನಿ ಯೋಜನೆಗಳ ಮೂಲಕ ಕಿಂಡಿ ಅಣೆಕಟ್ಟೆಗಳನ್ನು ನಿರ್ಮಿಸಿ ಅಂತರ್ಜಲ ಅಭಿವೃದ್ಧಿಗೆ ರಾಜ್ಯ ಸರ್ಕಾರ ಆದ್ಯತೆ ನೀಡುತ್ತಿದೆ. ಜಲ ಸಂಪನ್ಮೂಲವನ್ನು ಕ್ರೋಡೀಕರಿಸುವ ಕೆಲಸ ಒಂದೆಡೆಯಾದರೆ, ಇದರಮೇಲೆ ರಸ್ತೆ ನಿರ್ಮಿಸಿ ಸಂಪರ್ಕ ಕೂಡಾ ಸಾಧ್ಯವಾಗುತ್ತದೆ. ಕಡಿಮೆ ಖರ್ಚಿನಲ್ಲಿ ಉತ್ತಮ ಪ್ರಯೋಜನ ನೀಡುತ್ತಿದ್ದು, ಇಂತಹ ಯೋಜನೆಗಳನ್ನು ಕರಾವಳಿಯಲ್ಲಿ ಇನ್ನಷ್ಟು ಕಡೆಗಳಲ್ಲಿ ಅನುಷ್ಠಾನಗೊಳಿಸಲಾಗುವುದು, ಕಿಂಡಿ ಅಣೆಕಟ್ಟೆಗಳ ಅಗತ್ಯದ ಬಗ್ಗೆ ಅಧಿಕಾರಿಗಳು ಅಂದಾಜು ಪಟ್ಟಿ ಕಳುಹಿಸಿಕೊಡುವಂತೆ ತಿಳಿಸಲಾಗಿದೆ’ ಎಂದರು.

ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಿ ಮಾತನಾಡಿ,‘ಯೋಜನೆ ಮೂಲಕ ಉಪ್ಪಿನಂಗಡಿ-ಹಿರೇಬಂಡಾಡಿ ಗ್ರಾಮಗಳ ಸಂಪರ್ಕ ಸಾಧ್ಯವಾದರೆ, ಇನ್ನೊಂದೆಡೆ ನೀರುಶೇಖರಗೊಂಡು ಅಂತರ್ಜಲ ವೃದ್ಧಿಯಾಗಿ ಸುತ್ತಮುತ್ತಲ ರೈತರಿಗೆ ಪ್ರಯೋಜನ ಆಗಲಿದೆ’ ಎಂದರು.

ತಿಪಟೂರು ಶಾಸಕ ಬಿ.ಸಿ. ನಾಗೇಶ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಪುತ್ತೂರು ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಲಲಿತಾ ಈಶ್ವರ್, ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ರಹಿಮಾನ್, ಉಪಾಧ್ಯಕ್ಷೆ ಹೇಮಲತಾ ಶೆಟ್ಟಿ, ಸದಸ್ಯರಾದ ಸುನಿಲ್ ದಡ್ಡು, ಸುರೇಶ್ ಅತ್ರಮಜಲು, ಜಿಲ್ಲಾ ಪಂಚಾಯಿತಿ ಸದಸ್ಯೆ ಶಯನಾ ಜಯಾನಂದ್, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಮುಕುಂದ, ಸಾಜ ರಾಧಾಕೃಷ್ಣ ಆಳ್ವ, ಸುಜಾತಕೃಷ್ಣ ಆಚಾರ್ಯ, ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಬಜತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂತೋಷ್ ಕುಮಾರ್, ಹಿರೇಬಂಡಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಮ್ಮಬ್ಬ ಶೌಕತ್ ಅಲಿ, ಉಪ್ಪಿನಂಗಡಿ ಸಿಎ ಬೇಂಕ್ ಅಧ್ಯಕ್ಷ ಯಶವಂತ, ನಿರ್ದೇಶಕ ರಾಮಚಂದ್ರ ಮಣಿಯಾಣಿ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಮೈಸೂರು ವೃತ್ತದ ಅಧೀಕ್ಷಕ ಎಂಜಿನಿಯರ್‌ ರಾಜಶೇಖರ ಯಡಹಳ್ಳಿ, ಇಲಾಖಾ ಎಂಜಿನಿಯರ್ ಗೋಕುಲ್‌ದಾಸ್, ಆನಂದ್ ಬಂಜನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT