ಮಂಗಳೂರು: ‘ಮತ್ತೊಮ್ಮೆ ಸಚಿವ ಸ್ಥಾನ ದೊರೆತಿದ್ದು, ಕೊಟ್ಟ ಜವಾಬ್ದಾರಿ ಸಮ ರ್ಪಕವಾಗಿ ನಿಭಾಯಿಸುತ್ತೇನೆ’ ಎಂದು ಸಚಿವ ಎಸ್.ಅಂಗಾರ ಹೇಳಿದರು.

ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ನಗರದ ಬಿಜೆಪಿ ಜಿಲ್ಲಾ ಕಚೇರಿಗೆ ಶುಕ್ರವಾರ ಭೇಟಿ ನೀಡಿದ ಸಂದರ್ಭದಲ್ಲಿ ಪಕ್ಷದ ವತಿಯಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

‘ನಿಷ್ಠೆಯಿಂದ ದುಡಿಯುವವರನ್ನು ಪಕ್ಷ ಯಾವತ್ತೂ ಕೈ ಬಿಟ್ಟಿಲ್ಲ. ಯಾವುದೇ ಸ್ಥಾನಕ್ಕಾಗಿ ನಾನು ಲಾಬಿ ಮಾಡಿದವನಲ್ಲ, ಮಾಡುವುದೂ ಇಲ್ಲ. ಪಕ್ಷದ ಹಿರಿಯರು ಅವಕಾಶ ಕಲ್ಪಿಸಿದ್ದು, ಕೊಟ್ಟ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುವುದು ನನ್ನ ಧರ್ಮ. ಹಿರಿಯರ ಮಾರ್ಗದರ್ಶನದೊಂದಿಗೆ ಕಾರ್ಯಕರ್ತರು ನನ್ನ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಕಾರ್ಯ ನಿರ್ವಹಿಸುತ್ತೇನೆ’ ಎಂದು ಹೇಳಿದರು.

‘ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರ ಜೊತೆಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನನ್ನಿಂದಾದಷ್ಟು ಕೆಲಸ ಮಾಡುತ್ತೇನೆ. ಅಭಿವೃದ್ಧಿ ವಿಚಾರದಲ್ಲಿ ರಾಜಿ ಇಲ್ಲ’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ್ ಎಂ.ಮಾತನಾಡಿ, ‘ಸಂಘಟನೆ ಯಿಂದ ಬೆಳೆದು ಬಂದ ಹಿರಿಯ ರಾಜಕಾರಣಿ ಎಸ್.ಅಂಗಾರ ಅವರಿಗೆ ಅರ್ಹವಾಗಿಯೇ ಸಚಿವ ಸ್ಥಾನ ಸಿಕ್ಕಿರುವುದಕ್ಕೆ ಹೆಮ್ಮೆಯಿದೆ. ಜಿಲ್ಲಾ ಬಿಜೆಪಿಗೂ ಇದು ಸಂಭ್ರಮದ ದಿನ’ ಎಂದರು.

ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಮೋನಪ್ಪ ಭಂಡಾರಿ, ಮೇಯರ್ ಪ್ರೇಮಾನಂದ ಶೆಟ್ಟಿ, ಉಪ ಮೇಯರ್ ಸುಮಂಗಳಾ ರಾವ್, ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಪಾಲಿಕೆ ಸಚೇತಕ ಸುಧೀರ್ ಶೆಟ್ಟಿ ಕಣ್ಣೂರು, ನಿಗಮಗಳ ಅಧ್ಯಕ್ಷರಾದ ನಿತಿನ್ ಕುಮಾರ್, ಸಂತೋಷ್ ಕುಮಾರ್ ರೈ ಬೋಳಿಯಾರ್, ಬಿಜೆಪಿ ಪ್ರಭಾರಿ ರಾಜೇಶ್ ಕಾವೇರಿ, ನಗರ ದಕ್ಷಿಣ ಮಂಡಲ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ ಇದ್ದರು. ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಸ್ವಾಗತಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.