ಗುರುವಾರ , ಜೂನ್ 17, 2021
21 °C
ಪತ್ನಿ ಸಾವಿತ್ರಿ ಸಹಿತ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಿದರು

ಕುಕ್ಕೆ ದೇಗುಲಕ್ಕೆ ಸಚಿವ ಸುರೇಶ್‌ಕುಮಾರ್ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸುಬ್ರಹ್ಮಣ್ಯ: ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಸೋಮವಾರ ಆಗಮಿಸಿ ದೇವರ ದರ್ಶನ ಪಡೆದರು.

ಅವರು ಪತ್ನಿ ಸಾವಿತ್ರಿ ಸಹಿತ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಿ ಮಹಾಪೂಜೆಯಲ್ಲಿ ಪಾಲ್ಗೊಂಡರು. ಅರ್ಚಕ ರಾಜೇಶ್ ಸಚಿವರನ್ನು ಶಾಲು ಹೊದಿಸಿ ಪ್ರಸಾದ ನೀಡಿ ಹರಸಿದರು. ಜನ್ಮದಿನದ ಪ್ರಯುಕ್ತ ಸಚಿವರು ದೇಗುಲಕ್ಕೆ ಭೇಟಿ ನೀಡಿದ್ದರು.

ನೂತನ ಬ್ರಹ್ಮರಥಕ್ಕೆ ನೆರವೇರುತಿದ್ದ ಬ್ರಹ್ಮರಥದ ವೈದಿಕ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡರು. ನರಸಿಂಹ ಗುಡಿ ಹಾಗೂ ಹೊಸಳಿಗಮ್ಮ ದೇವರ ಗುಡಿಗಳಿಗೆ ತೆರಳಿ ಪ್ರಸಾದ ಸ್ವೀಕರಿಸಿದರು. ಮಧ್ಯಾಹ್ನ ಅನ್ನಪ್ರಸಾದ ಸ್ವೀಕರಿಸಿದರು.

ಖಾಸಗಿಯಾಗಿ ಬಂದಿದ್ದರಿಂದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಲು ನಿರಾಕರಿಸಿದರು. ಅಂಗರಕ್ಷಕ ಪಡೆ ಇಲ್ಲದೆ ಆಗಮಿಸಿದ್ದರು. ಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಕುಕ್ಕೆ ಕ್ಷೇತ್ರಕ್ಕೆ ಆಗಮಿಸಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು