ಮಂಗಳೂರು: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಸಂಘರ್ಷಕ್ಕೊಳಗಾದ ಒಬ್ಬ ಬಾಲಕ ಸೇರಿದಂತೆ ಎಂಟು ಜನರನ್ನು ಬಜಪೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಾರ್ತಿಕ್, ರಾಕೇಶ್ ಸಲ್ಡಾನ, ಜೀವನ್, ಸಂದೀಪ್, ರಕ್ಷಿತ್, ಶ್ರವಣ್ ಮತ್ತು ಸುರೇಶ್ ಬಂಧಿತರು.

‘ಇನ್ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ ಕಾರ್ತಿಕ್ ಜೊತೆ, ಬಾಲಕಿ ಆಗಾಗ ಸಂದೇಶ ವಿನಿಮಯ ಮಾಡಿಕೊಳ್ಳುವ ಜೊತೆಗೆ ಕಾಲ್ ಮಾಡಿ ಮಾತನಾಡುತ್ತಿದ್ದಳು. ಜೂನ್ ಕೊನೆಯ ವಾರದಲ್ಲಿ, ಕಾರ್ತಿಕ್ ಈ ಬಾಲಕಿಯನ್ನು ಅಡ್ಯಾರ್ ಜಲಪಾತಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ ಬಾಲಕಿಯ ಮೇಲೆ ಆತ ಲೈಂಗಿಕ ದೌರ್ಜನ್ಯ ಎಸಗಿದ್ದು, ನಂತರ ರಾಕೇಶ್ ಸಲ್ಡಾನ ಆತನ ಜೊತೆ ಸೇರಿಕೊಂಡಿದ್ದಾನೆ.

ರಾಕೇಶ್ ಹಲ್ಲೆ ಮಾಡಿರುವುದಾಗಿ ಹೇಳಿ, ವಿಡಿಯೊ ಮಾಡಿಕೊಂಡಿದ್ದ ಕಾರ್ತಿಕ್, ಆ ವಿಡಿಯೊವನ್ನು ಸ್ನೇಹಿತರೊಂದಿಗೆ ಹಂಚಿಕೊಂಡಿದ್ದ. ದೌರ್ಜನ್ಯಕ್ಕೆ ಒಳಗಾದ ಬಾಲಕಿಯ ದೂರಿನ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಏಳು ಆರೋಪಿಗಳನ್ನು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.