ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದಿಂದ ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಒತ್ತು: ಸಚಿವ ಎಸ್. ಅಂಗಾರ

Last Updated 4 ಜುಲೈ 2022, 4:42 IST
ಅಕ್ಷರ ಗಾತ್ರ

ಪುತ್ತೂರು: ಜನತೆಯ ಬದುಕಿಗೆ ಬೆಳಕು ನೀಡುವ ಏಕೈಕ ಕ್ಷೇತ್ರ ಶಿಕ್ಷಣ. ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಆದ್ಯತೆ ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರವು ಮೌಲಾನಾ ಅಜಾದ್ ಮಾದರಿ ಶಾಲೆಗಳನ್ನು ಸ್ಥಾಪಿಸುತ್ತಿದ್ದು, ಜಿಲ್ಲೆಯಲ್ಲಿ 8 ಮಾದರಿ ಶಾಲೆಗಳ ನಿರ್ಮಾಣವಾಗಿದೆ ಎಂದು ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಹೇಳಿದರು.

ಪುತ್ತೂರು ನಗರದ ಪಡೀಲಿನಲ್ಲಿ ₹2.35 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಮೌಲಾನಾ ಆಜಾದ್ ಮಾದರಿ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯ 8 ಶಾಲೆಗಳಲ್ಲಿ 2,400 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ ಎಂದರು.

ಶಾಸಕ ಸಂಜೀವ ಮಠಂದೂರು, ಸರ್ಕಾರವು ಎಪಿಜೆ ಅಬ್ದುಲ್ ಕಲಾಂ ಹೆಸರಿನಲ್ಲಿ ಸರ್ಕಾರಿ ಮಾದರಿ ಶಾಲೆಗಳನ್ನು ಆರಂಭಿಸಲಿದೆ. ಹೋಬಳಿಗೊಂದು ಮಾದರಿ ಶಾಲೆ ನಿರ್ಮಿಸುವ ಉದ್ದೇಶವಿದ್ದು, ಅಲ್ಪಸಂಖ್ಯಾತ ಸಮುದಾಯದ ಶಿಕ್ಷಣಕ್ಕಾಗಿ ಹಲವಾರು ಯೋಜನೆಗಳನ್ನು ಸರ್ಕಾರ ರೂಪಿಸಿದೆ ಎಂದರು.

ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಶಾಲೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪಠ್ಯ ಪುಸ್ತಕ ವಿತರಣೆ ಮಾಡಲಾಯಿತು. ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ನವೀನ್ ಭಂಡಾರಿ, ನಗರಸಭಾ ಪೌರಾಯುಕ್ತ ಮಧು ಎಸ್. ಮನೋಹರ್, ತಹಶೀಲ್ದಾರ್ ನಿಸರ್ಗಪ್ರಿಯ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅಂಜನಪ್ಪ ಎಸ್, ತಾಲ್ಲೂಕು ವಿಸ್ತರಣಾಧಿಕಾರಿ ವೀರಭದ್ರಪ್ಪ ಬಿ.ಎಸ್, ನಿರ್ಮಿತಿ ಕೇಂದ್ರದ ಕಾರ್ಯ ನಿರ್ವಾಹಕ ನಿರ್ದೇಶಕ ರಾಜೇಂದ್ರ ಕಲ್ಬಾವಿ ಇದ್ದರು.

ಮುಖ್ಯ ಶಿಕ್ಷಕ ಅವಿನಾಶ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿದರು. ಶಿಕ್ಷಕ ಮಹಮ್ಮದ್ ತೌಸೀಫ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT