ಕಳೆದ ವರ್ಷ ಜಿಲ್ಲೆಯಲ್ಲಿ 63102 ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ₹16.18 ಕೋಟಿ ಮೊತ್ತದ ವಿದ್ಯಾರ್ಥಿವೇತನ ಬಿಡುಗಡೆ ಮಾಡಲಾಗಿದೆ. ಇನ್ನೂ 13924 ಮಂದಿಗೆ ಮಂಜೂರಾತಿ ಬಾಕಿ ಇದೆ. ವಿದೇಶಿ ಅಧ್ಯಯನ ವಿದ್ಯಾರ್ಥಿ ವೇತನ ಯೋಜನೆಯಡಿಯಲ್ಲಿ 120 ವಿದ್ಯಾರ್ಥಿಗಳಿಗೆ ₹11.39 ಕೋಟಿ ಬಿಡುಗಡೆ ಮಾಡಲಾಗಿದೆ. ಪ್ರಸಕ್ತ ವರ್ಷದಲ್ಲಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿದ್ದು ಸೆಪ್ಟೆಂಬರ್ 30 ರವರೆಗೆ ಕಾಲಾವಕಾಶ ಇದೆ ಎಂದು ಅಲ್ಪಸಂಖ್ಯಾತ ಇಲಾಖೆ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.