ಬೆಳ್ತಂಗಡಿ: ತಾಲ್ಲೂಕಿನ ನಾವೂರು ಸಮೀಪದ ಮುರ ಜುಮ್ಮಾ ಮಸೀದಿಗೆ ದುಷ್ಕರ್ಮಿಗಳ ತಂಡವೊಂದು ಬಿಯರ್ ಬಾಟಲಿ ಎಸೆದು ದಾಂಧಲೆ ನಡೆಸಿರುವ ಘಟನೆ ನಡೆದಿದೆ.

ಬುಧವಾರ ತಡ ರಾತ್ರಿಯ ವೇಳೆ ದುಷ್ಕರ್ಮಿಗಳು ಮಸೀದಿಯ ಆವರಣದೊಳಗೆ ಬಿಯರ್ ಬಾಟ್ಲಿ ಎಸೆದಿದ್ದಾರೆ. ಆವರಣದಲ್ಲಿ ನಿಲ್ಲಿಸಲಾಗಿದ್ದ ಕಾರಿನ ಮೇಲೆ ಬಿಯರ್ ಬಾಟ್ಲಿಗಳು ಬಿದ್ದಿರುವುದಾಗಿ ತಿಳಿದು ಬಂದಿದೆ.

ದುಷ್ಕರ್ಮಿಗಳ ಕುಕೃತ್ಯವು ಸ್ಥಳದಲ್ಲಿದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಸೀದಿಯೊಳಗೆ ಬಿಯರ್ ಬಾಟ್ಲಿ ಎಸೆದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯ ಎಸಗಿದವರ ಬಗ್ಗೆ ಯಾವುದೇ ಮಾಹಿತಿಗಳು ತಿಳಿದು ಬಂದಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.