ಮಂಗಳೂರು: ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕೆಲವು ಕಿಡಿಗೇಡಿಗಳು ನಗರದ ಸ್ಟೇಟ್ ಬ್ಯಾಂಕ್ ನಿಂದ ಜೋಕಟ್ಟೆಗೆ ಹೋಗುವ 'ಮೌಲಾ' 2 ಸಿ ಸಿಟಿ ಬಸ್ ಗೆ ಲಾಲ್ಬಾಗ್ ನಲ್ಲಿ ಸೋಮವಾರ ಕಲ್ಲು ತೂರಿದರು. ಇದರಿಂದ ಪ್ರಯಾಣಿಕ ಮಹಿಳೆಯೊಬ್ಬರಿಗೆ ಗಾಯವಾಗಿದೆ.
'ಬಸ್ನಲ್ಲಿ ಹತ್ತು ಮಂದಿ ಪ್ರಯಾಣಿಕರಿದ್ದರು. ಚಾಲಕ ಸೀಟಿನ ಹಿಂದೆ ಕುಳಿತ್ತಿದ್ದ ಮಹಿಳೆಗೆ ಗಾಯವಾಗಿದೆ. ನಾಲ್ವರು ಸೇರಿ ಕಲ್ಲು ತೂರಿದ್ದಾರೆ. ಈ ಬಸ್ ನೌಫಾಲ್ ಎಂಬ ಬಿಜೆಪಿ ನಾಯಕರಿಗೆ ಸೇರಿದ್ದು. ಉದ್ದೇಶಪೂರ್ವಕವಾಗಿ ಕಲ್ಲು ತೂರಾಟ ನಡೆಸಲಾಗಿದೆ' ಎಂದು ಬಸ್ ಸಿಬ್ಬಂದಿ ತಿಳಿಸಿದರು.
ಬಸ್ ನಲ್ಲಿದ್ದ ಪ್ರಯಾಣಿಕರನ್ನು ಇನ್ನೊಂದು ಬಸ್ ನಲ್ಲಿ ಕಳುಹಿಸಿಕೊಡಲಾಯಿತು.