ಮಂಗಳೂರು: ‘ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ತೊಡಗಿದ್ದ ಬಿಜೆಪಿಯ ಯುವಮೋರ್ಚಾ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ ಪೊಲೀಸರು ಕಾನೂನು ಕ್ರಮ ಕೈಗೊಂಡರೆ, ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜ ಅವರ ಗೂಂಡಾ ವರ್ತನೆ ತೋರಿದ್ದಾರೆ. ಇದು ಅಕ್ಷಮ್ಯ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟಿದ್ದಾರೆ.

ಈ ಘಟನೆಗೆ ಸಂಬಂಧಿಸಿದ ವಿಡಿಯೊವನ್ನು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಹಂಚಿಕೊಂಡಿರುವ ಅವರು, ‘ಹರೀಶ್ ಪೂಂಜ ಅವರು ಅಕ್ರಮ ಲೂಟಿಕೋರರ ಪರ ನಿಂತು ಸಮಾಜದ ಶಾಂತಿ ಸುವ್ಯವಸ್ಥೆ ಕಾಪಾಡುವ ಪೊಲೀಸರ ವಿರುದ್ಧವೇ ಗೂಂಡಾ ವರ್ತನೆ ತೋರಿದ್ದಾರೆ. ಸಮಾಜದ ಕಾನೂನು ಸುವ್ಯವಸ್ಥೆ ಬಗ್ಗೆ ಕಾಳಜಿ ಇಲ್ಲ. ಶಾಸಕರಾಗಿ ಪೊಲೀಸರ ಕಾರ್ಯಕ್ಕೆ ಅಡ್ಡಿ ಪಡಿಸಿ ಈ ರೀತಿ ಗೂಂಡಾಗಿರಿ ತೋರಿರುವುದು ಎಷ್ಟು ಸರಿ’ ಎಂದು ಅವರು ಪ್ರಶ್ನಿಸಿದ್ದಾರೆ.

‘ಸ್ವತಃ ಬಿಜೆಪಿ ಶಾಸಕರೇ ಮುಂದೆ ನಿಂತು ಸರ್ಕಾರಿ ಅಧಿಕಾರಿಗಳಿಗೆ ಕಾನೂನಾತ್ಮಕವಾಗಿ ಕೆಲಸ ಮಾಡಲು ಅಡ್ಡಿಪಡಿಸುವ ಈ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ. ಬಿಜೆಪಿಗೆ ಸಂವಿಧಾನದ ಬಗ್ಗೆ ಗೌರವವಿಲ್ಲ. ಸಮಾಜಘಾತುಕರ ಪರ ನಿಂತು ಬಿಜೆಪಿ ಶಾಸಕರು ರಾಜಕಾರಣ ಮಾಡುತ್ತಿರುವುದು ಈ ಪ್ರಕರಣದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
.ಬಿಜೆಪಿಯ ರೌಡಿ ಎಂಎಲ್ಎ ಹರೀಶ್ ಪೂಂಜಾ ದಬ್ಬಾಳಿಕೆ ನಡೆಸಿದ್ದಾರೆ: ಕಾಂಗ್ರೆಸ್ ಟೀಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.