ಭಾನುವಾರ, ಅಕ್ಟೋಬರ್ 24, 2021
22 °C

ಕಬಡ್ಡಿ ವಸತಿ ನಿಲಯ: ಕಾಮತ್ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾಂಗಣದಲ್ಲಿ ಕಬಡ್ಡಿಯ ಬಾಲಕ- ಬಾಲಕಿಯರ ಕ್ರೀಡಾ ವಸತಿ ನಿಲಯ ಸ್ಥಾಪಿಸುವಂತೆ ಯುವ‌ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣ ಗೌಡ ಅವರಿಗೆ ಶಾಸಕ ವೇದವ್ಯಾಸ್ ಕಾಮತ್ ಮಂಗಳವಾರ ಮನವಿ ಸಲ್ಲಿಸಿದರು.

ಅಧಿವೇಶನದ ಸಂದರ್ಭದಲ್ಲಿ ಸಚಿವರನ್ನು ಭೇಟಿಯಾಗಿರುವ ಶಾಸಕ ಕಾಮತ್‌, ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೇಕ ಪ್ರತಿಭಾನ್ವಿತ ಕಬಡ್ಡಿ ಪಟುಗಳು ಇದ್ದಾರೆ. ಇವರು ರಾಜ್ಯ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳಗಿ ಕೀರ್ತಿ ತಂದಿದ್ದಾರೆ. ಆದರೆ, ನಮ್ಮ ಜಿಲ್ಲಾ ಕ್ರೀಡಾ ವಸತಿ ನಿಲಯದಲ್ಲಿ ಕಬಡ್ಡಿ ಕ್ರೀಡೆಗೆ ಸಂಬಂಧಿಸಿದಂತೆ ಮಕ್ಕಳ ಸೇರ್ಪಡೆಗೆ ಅವಕಾಶ ಬೇಕಾಗಿದೆ. ಅಲ್ಲದೇ, ಅಗತ್ಯ ತರಬೇತುದಾರರು, ಸೌಲಭ್ಯಗಳನ್ನೂ ಕಲ್ಪಿಸಬೇಕು’ ಎಂದು ಮನವಿ ಮಾಡಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.