ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನಪ್ರತಿನಿಧಿಗಳ ಸಭೆ ಕರೆಯಿರಿ

ತೌಕ್ತೆ ಚಂಡಮಾರುತ: ಶಾಸಕ ಯು.ಟಿ.ಖಾದರ್ ಆಗ್ರಹ
Last Updated 16 ಮೇ 2021, 2:40 IST
ಅಕ್ಷರ ಗಾತ್ರ

ಮಂಗಳೂರು: ತೌಕ್ತೆ ಚಂಡಮಾರುತದ ಪರಿಣಾಮ ಕರಾವಳಿಯಾದ್ಯಂತ ಶುಕ್ರವಾರದಿಂದ ಗಾಳಿ–ಮಳೆಯಾಗುತ್ತಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಪ್ರಾಕೃತಿಕ ವಿಕೋಪ ತಡೆ, ರಕ್ಷಣೆ ಹಾಗೂ ಪರಿಹಾರಗಳಿಗಾಗಿ ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆಯಬೇಕು ಎಂದು ಶಾಸಕ ಯು.ಟಿ.ಖಾದರ್ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಯಲ್ಲಿ ಮನವಿ ಮಾಡಿದ್ದಾರೆ.

ಸಾರ್ವಜನಿಕರು ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಆಯಾ ಪ್ರದೇಶದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಾರ್ವಜನಿಕರಿಗೆ ನೆರವಾಗಬೇಕು ಎಂದು ತಿಳಿಸಿದ್ದಾರೆ.

ಸೋಮೇಶ್ವರ ಪ್ರದೇಶದಲ್ಲಿ ಕಳೆದ ವರ್ಷ ಕೂಡ ದೇವಸ್ಥಾನದ ಮೋಹನ್ ಮನೆಯ ಬಳಿ ವ್ಯಾಪಕ ಕಡಲ್ಕೊರೆತ ಸಂಭವಿಸಿತ್ತು. ಆ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ಕೊಟ್ಟ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕಡಲ್ಕೊರೆತ ತಡೆಗೆ ಕ್ರಮ ಕೈಗೊಂಡು, ಘಟನೆ ಪುನಾರಾವರ್ತನೆ ಆಗದಂತೆ ನೋಡಿಕೊಳ್ಳುವ ಭರವಸೆ ನೀಡಿದ್ದರು. ನಂತರದ ದಿನಗಳಲ್ಲಿ ಯಾವುದೇ ಕೆಲಸ ಆಗದ ಪರಿಣಾಮ, ಸೋಮೇಶ್ವರ ಉಚ್ಚಿಲ ಬೆಟ್ಟಂಪಾಡಿ ಪ್ರದೇಶದಲ್ಲಿ ಹೆಚ್ಚಿನ ಆಸ್ತಿಪಾಸ್ತಿ ನಷ್ಟವಾಗುವ ಭೀತಿ ಇದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸದೆ ಇದ್ದಲ್ಲಿ, ಜುಲೈ, ಆಗಸ್ಟ್ ತಿಂಗಳುಗಳಲ್ಲಿ ಹೆಚ್ಚಿನ ಕಡಲ್ಕೊರೆತ ಆಗುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದ್ದಾರೆ.

‘ಎಡಿಬಿ ಅಧಿಕಾರಿಗಳೇ ಇದರ ಜವಾಬ್ದಾರಿ ವಹಿಸಿಕೊಳ್ಳಬೇಕು. ಇದಕ್ಕೆ ಸಂಬಂಧಿಸಿದಂತೆ ಒಂದು ತಿಂಗಳ ಹಿಂದೆ ಸರ್ಕಾರಕ್ಕೆ ಪತ್ರ ಬರೆದು ಎಡಿಬಿಯವರ ಕೆಲಸ ಸಮರ್ಪಕವಾಗಿದೆ ಎಂದು ತಜ್ಞರ ಸಮಿತಿ ವರದಿ ನೀಡುವವರೆಗೂ ಬಂದರು ಇಲಾಖೆ ಇದನ್ನು ಸುಪರ್ದಿಗೆ ತೆಗೆದುಕೊಳ್ಳಬಾರದೆಂದು ಒತ್ತಾಯಿಸಿದ್ದೇನೆ’ ಎಂದು ಖಾದರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT