ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸರ್ಕಾರದಲ್ಲಿ ಶಿಕ್ಷಣಕ್ಕೆ ಆದ್ಯತೆ’

Last Updated 23 ಜೂನ್ 2021, 16:40 IST
ಅಕ್ಷರ ಗಾತ್ರ

ಮುಡಿಪು: ವಿದ್ಯಾರ್ಥಿಗಳು ಬಲಿಷ್ಠರಾದರೆ ಮಾತ್ರ ದೇಶ ಬಲಿಷ್ಠವಾಗುತ್ತದೆ. ಹಾಗಾಗಿ ಶಿಕ್ಷಣದಲ್ಲಿ ಸ್ಪರ್ಧೆಗೆ ಸರ್ಕಾರಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಡುತ್ತಿದೆ. ಶಿಕ್ಷಣಕ್ಕೆ ಆದ್ಯತೆ ನೀಡುವುದೇ ಸರ್ಕಾರದ ಗುರಿ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು.

ಕುರ್ನಾಡು ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಸ್ಮಾರ್ಟ್ ಕ್ಲಾಸ್ ಹಾಗೂ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ ವಿತರಿಸಿ ಅವರು ಮಾತನಾಡಿದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಡಿ.ಎಸ್. ಗಟ್ಟಿ ಮಾತನಾಡಿದರು. ‘ಮುಡಿಪು ಕಾಲೇಜು ಎಲ್ಲ ವಿಭಾಗಗಳಲ್ಲಿ ಉನ್ನತ ಸ್ಥಾನದಲ್ಲಿದೆ. ಕಾಲೇಜಿನ ಆವರಣಗೋಡೆ ಆದಷ್ಟು ಶೀಘ್ರ ನಿರ್ಮಾಣ ಆಗಬೇಕಾಗಿದೆ’ ಎಂದುಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷಪ್ರಶಾಂತ್ ಕಾಜವ ಹೇಳಿದರು.

ಪ್ರಿನ್ಸಿಪಾಲ್ ಗಿರಿಧರ್ ರಾವ್ ಮಾತನಾಡಿ, ‘ಪ್ರಥಮ ಪದವಿಯ 93 ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ದೊರಕಿಸಿಕೊಟ್ಟಿರುವುದು ಶ್ಲಾಘನೀಯ’ ಎಂದರು.ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಹಾಸ್ ಕರ್ಕೇರ, ಕಾಲೇಜಿನ ಐಟಿ ಸಂಚಾಲಕ ಅಜಯ್, ಅಬ್ದುಲ್ ಜಲೀಲ್ ಮೋಂಟುಗೋಳಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಪದವಿಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕಿ ಶೋಭಾ ಕಾರ್ಯಕ್ರಮ‌ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT