ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುತ್ತೂರು: ಹೆದ್ದಾರಿ ಅಪಾಯಕಾರಿ ತಿರುವು ತೆರವಿಗೆ ಶಾಸಕರ ಸೂಚನೆ

Published 13 ಏಪ್ರಿಲ್ 2024, 13:58 IST
Last Updated 13 ಏಪ್ರಿಲ್ 2024, 13:58 IST
ಅಕ್ಷರ ಗಾತ್ರ

ಪುತ್ತೂರು: ತಾಲ್ಲೂಕಿನ ಆರ್ಯಾಪು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲರ್ಪೆಯಲ್ಲಿ ಮಾಣಿ - ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಅಪಾಯಕಾರಿ ತಿರುವು ಭಾಗದ ಧರೆ ತೆರವುಗೊಳಿಸುವಂತೆ ಶಾಸಕ ಅಶೋಕ್‌ಕುಮಾರ್‌ ರೈ ಅವರು ಶನಿವಾರ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಪ್ರಸಾದ್ ಅವರಿಗೆ ಸೂಚನೆ ನೀಡಿದರು.

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲರ್ಪೆಯ ಅಪಾಯಕಾರಿ ತಿರುವು ಭಾಗದಲ್ಲಿ ಹಲವು ಅಫಘಾತಗಳು ನಡೆದಿದ್ದು, ಮೂವರು ಮೃತಪಟ್ಟಿದ್ದಾರೆ. ಈ ಧರೆಯನ್ನು ತೆರವು ಮಾಡಿ ವಾಹನ ಸಂಚಾರಕ್ಕೆ ಅನುಕೂಲವಾಗುವಂತೆ ಮಾಡಬೇಕು ಎಂಬ ಆಗ್ರಹ ವ್ಯಕ್ತವಾಗಿತ್ತು. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮನವಿ ಮಾಡಿದ್ದರು. ಸ್ಪಂದಿಸಿದ ಶಾಸಕರು ಧರೆ ತೆರವುಮಾಡುವಂತೆ ಸೂಚನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT