ಸೋಮವಾರ, ಆಗಸ್ಟ್ 8, 2022
24 °C
ವಿಧಾನಸಭೆಯಲ್ಲಿನ ವಿರೋಧ ಪಕ್ಷದ ಉಪನಾಯಕ ಯು.ಟಿ. ಖಾದರ್

ತಾಲ್ಲೂಕು, ಗ್ರಾಮದಲ್ಲಿ ಟಾಸ್ಕ್‌ ಫೋರ್ಸ್‌ ರಚಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಳ್ಳಾಲ: ‘ತುರ್ತು ಕಾರ್ಯಾಚರಣೆಗೆ ತಹಶೀಲ್ದಾರ್ ನೇತೃತ್ವಲ್ಲಿ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ರಚನೆ ಮತ್ತು ಗ್ರಾಮ ಮಟ್ಟದಲ್ಲಿ ಪಂಚಾಯತ್ ಅಧಿಕಾರಿ ಮತ್ತು ಜನಪ್ರತಿನಿಧಿಗಳ ನೇತೃತ್ವದಲ್ಲಿ ವಿಪತ್ತು ನಿರ್ವಹಣಾ ಸಮಿತಿ ರಚಿಸಿ’ ಎಂದು ಶಾಸಕ ಯು.ಟಿ. ಖಾದರ್ ತಿಳಿಸಿದರು.

ದೇರಳಕಟ್ಟೆಯಲ್ಲಿ ಉಳ್ಳಾಲ ತಾಲ್ಲೂಕು ಮಟ್ಟದ ಪ್ರಾಕೃತಿಕ ವಿಕೋಪಕ್ಕೆ ವಿವಿಧ ಇಲಾಖೆಗಳು ಹಾಗೂ ಸ್ಥಳೀಯಾಡಳಿತಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸೂಚನೆ ನೀಡಿದರು. 

ವಿವಿಧ ಇಲಾಖೆಗಳ ಅಧಿಕಾರಿಗಳು ಪ್ರಾಕೃತಿಕ ವಿಕೋಪ ಎದುರಿಸುವ ನಿಟ್ಟಿನಲ್ಲಿ ನೀಡಿದ ಸಲಹೆಗಳನ್ನು ಶಾಸಕರು ಆಲಿಸಿದರು.

ತಾಲ್ಲೂಕಿನಾದ್ಯಂತ ರಸ್ತೆ ನಿರ್ಮಾಣ ಮಾಡಿದ್ದರೂ, ಸ್ಥಳೀಯಾಡಳಿತಗಳು ಚರಂಡಿಯ ನಿರ್ವಹಣೆ ನಡೆಸದ ಕಾರಣ ರಸ್ತೆಯಲ್ಲೇ ನೀರು ಹರಿದಿದೆ. ಸಣ್ಣ ಕಾರ್ಯಕ್ಕೂ ಜೆಸಿಬಿಗೆ ಕಾಯದೆ, ಸ್ಥಳೀಯರ ಸಹಕಾರ ಪಡೆದು ಸಮಸ್ಯೆ ಬಗೆಹರಿಸಲು ಯತ್ನಿಸಬೇಕು ಎಂದರು. 

ಕಳೆದ ಎರಡು ದಿನಗಳು ಮಳೆ ಸುರಿದಾಗ ಟಾಸ್ಕ್‌ಫೋರ್ಸ್‌ ಉತ್ತಮವಾಗಿ ಕಾರ್ಯ ನಿರ್ವಹಿಸಿದೆ. ಇದೇ ರೀತಿ ಹೊಂದಾಣಿಕೆಯಿಂದ ಕೆಲಸ ನಿರ್ವಹಿಸಿ ಎಂದು ಶ್ಲಾಘಿಸಿದರು. 

ಅಪಾಯದಲ್ಲಿರುವ ಮರ, ವಿದ್ಯುತ್ ಕಂಬ ತೆರವಿಗೆ ಕ್ರಮ ಕೈಗೊಳ್ಳಬೇಕು. ಗುಡ್ಡ ಕುಸಿತದಿಂದ ಅಪಾಯದಲ್ಲಿರುವ ಮನೆಗಳ ಬಗ್ಗೆ ಸರ್ವೆ ನಡೆಸಿ ಎಂದರು.

ಪ್ರಾಕೃತಿಕ ವಿಕೋಪದಿಂದ ಮನೆಗೆ ಹಾನಿಯಾದರೆ ಪರಿಹಾರ ನೀಡಲಾಗುವುದು. ಕಂಪೌಂಡ್ ಹಾನಿಯಾದರೆ, ಗುಡ್ಡ ಕುಸಿದು ಮನೆ ಅಪಾಯದಲ್ಲಿದ್ದರೆ ಪರಿಹಾರ ಇಲ್ಲ. ಈ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.

ತಹಶೀಲ್ದಾರ್ ಟಿ.ಜಿ. ಗುರುಪ್ರಸಾದ್ , ಉಳ್ಳಾಲ ಪೌರಾಯುಕ್ತೆ ವಿದ್ಯಾ ಎಂ. ಕಾಳೆ, ಸೋಮೇಶ್ವರ ಪೌರಾಯುಕ್ತ ಮತ್ತಾಡಿ, ಕೋಟೆಕಾರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಾಲಿನಿ, ಕಂದಾಯ ನಿರೀಕ್ಷಕ ಮಂಜುನಾಥ್ ಕೆ.ಎಚ್. ಮುಖಂಡ ಮಹಮ್ಮದ್ ಮೋನು, ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು