ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳ್ತಂಗಡಿ ತಾಲ್ಲೂಕು ಕಚೇರಿಗೆ ಶಾಸಕ ಭೇಟಿ, ಪರಿಶೀಲನೆ

Published 2 ಜುಲೈ 2024, 14:03 IST
Last Updated 2 ಜುಲೈ 2024, 14:03 IST
ಅಕ್ಷರ ಗಾತ್ರ

ಬೆಳ್ತಂಗಡಿ: ಇಲ್ಲಿನ ತಾಲ್ಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜ ಅವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾರ್ವಜನಿಕರ ಕುಂದುಕೊರತೆ ಆಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸರ್ವೆ ಇಲಾಖೆಗೆ ಭೇಟಿ ನೀಡಿದ ಶಾಸಕರು 1,400ಕ್ಕೂ ಹೆಚ್ಚು ಕಡತ ಬಾಕಿಯಾಗಿರುವುದನ್ನು ಗಮನಿಸಿ ಕೂಡಲೇ ವಿಲೇವಾರಿ ಮಾಡುವಂತೆ ಸೂಚಿಸಿದರು. ಕಡತಗಳು ಯಾವ ಹಂತದಲ್ಲಿವೆ ಎಂಬ ಬಗ್ಗೆ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತಾಲ್ಲೂಕು ಕಚೇರಿಯಲ್ಲಿ ಸ್ವಚ್ಛತೆ ಕಾಯ್ದುಕೊಳ್ಳುವಂತೆ ಸೂಚಿಸಿದ ಅವರು ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

ಶಿರ್ಲಾಲಿನಲ್ಲಿ ನದಿ ಒತ್ತುವರಿ ಮಾಡಿರುವ ದೂರು ಬಂದಿದ್ದರಿಂದ ಈ ಬಗ್ಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ, ಕಣಿಯೂರಿನಲ್ಲಿ ಜಮೀನು ಅಕ್ರಮ ಮಾಡಿ ಕೃಷಿ ಮಾಡುವ ಪ್ರಯತ್ನ ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ತಹಶೀಲ್ದಾರ್‌ಗೆ ಸೂಚಿಸಿದರು.

ಕೊಕ್ಕಡದ ನಾಲ್ಕು ಕುಟುಂಬಗಳು ತೊಂದರೆಯಲ್ಲಿ ಸಿಲುಕಿರುವ ಬಗ್ಗೆ ಕೊಕ್ಕಡ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಯೋಗೀಶ್ ಅವರು ಶಾಸಕ ಹಾಗೂ ಅಧಿಕಾರಿಗಳ ಗಮನ ಸೆಳೆದರು. ಸುರಕ್ಷಿತವಲ್ಲದ ಮನೆಯಲ್ಲಿ ವಾಸಿಸುತ್ತಿರುವ ಕುಟುಂಬಗಳನ್ನು ತಾತ್ಕಾಲಿಕ ಕಾಳಜಿ ಕೇಂದ್ರಗಳಿಗೆ ಕಳುಹಿಸಲಾಗುವುದು ಎಂದು ತಹಶೀಲ್ದಾರ್ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ ಜತೆಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT