4

ಕೊಕ್ಕಡ ಎಂಡೋ ವಿರೋಧಿ ಹೋರಾಟ ಸಮಿತಿಯಿಂದ ಶಾಸಕರುಗಳಿಗೆ ಸನ್ಮಾನ

Published:
Updated:
ನೆಲ್ಯಾಡಿ ಸಮೀಪ ಕೊಕ್ಕಡ ಎಂಡೋ ವಿರೋಧಿ ಹೋರಾಟ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ ಶಾಸಕರುಗಳಿಗೆ ಸನ್ಮಾನ ಸಮಾರಂಭದಲ್ಲಿ ಶಾಸಕ ಹರೀಶ್ ಪೂಂಜ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಇದ್ದರು.

ನೆಲ್ಯಾಡಿ(ಉಪ್ಪಿನಂಗಡಿ): ಕೊಕ್ಕಡದ ಎಂಡೋಸಲ್ಫಾನ್‌ ವಿರೋಧಿ ಹೋರಾಟ ಸಮಿತಿಯ ಆಶ್ರಯದಲ್ಲಿ ಸಂತ್ರಸ್ತರಿಂದ ಜಿಲ್ಲೆಯ ನೂತನ ಶಾಸಕರಿಗೆ ಸನ್ಮಾನ ಸಮಾರಂಭ ಶುಕ್ರವಾರ ಕೊಕ್ಕಡದ ಎಂಡೋ ಸಂತ್ರಸ್ತರ ಪಾಲನಾ ಕೇಂದ್ರದಲ್ಲಿ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಸಕರಿಗೂ ಆಹ್ವಾನ ನೀಡಲಾಗಿದ್ದು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಮಾತ್ರ ಭಾಗವಹಿಸಿದ್ದರು. ಉಳಿದಂತೆ 7 ಮಂದಿ ಶಾಸಕರು ಗೈರು ಹಾಜರಿದ್ದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಾತಣಾಡಿ ಕೊಕ್ಕಡ ಭಾಗದಲ್ಲಿ ಎಂಡೋಸಲ್ಫಾನ್ ಸಿಂಪಡಣೆಯಿಂದ ಉಂಟಾಗಿರುವ ಸಮಸ್ಯೆ ರಾಜ್ಯದಲ್ಲಿ ನಡೆದಿರುವ ಅತೀ ದೊಡ್ಡ ದುರಂತವಾಗಿದ್ದು, ಕೊಕ್ಕಡದಲ್ಲಿ ಶಾಶ್ವತ ಪುನರ್ವಸತಿ ಕೇಂದ್ರ ಸ್ಥಾಪನೆ ಸೇರಿದಂತೆ ಎಂಡೋ ಸಂತ್ರಸ್ತರ ಬೇಡಿಕೆ ಈಡೇರಿಸುವ  ನಿಟ್ಟಿನಲ್ಲಿ ಜಿಲ್ಲೆಯ ಶಾಸಕರೆಲ್ಲರೂ ಸೇರಿ ಆರೋಗ್ಯ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇವೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಹರೀಶ್‍ಕುಮಾರ್ ಮಾತನಾಡಿ, ‘ಎಂಡೋ ಸಂತ್ರಸ್ತರಿಗೆ ಕೇರಳ ಮಾದರಿ ಪರಿಹಾರ, ಶಾಶ್ವತ ಪುನರ್ವಸತಿ ಕೇಂದ್ರ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವ ನಿಟ್ಟಿನಲ್ಲಿ ದ.ಕ. ಹಾಗೂ ಉಡುಪಿ ಜಿಲ್ಲೆಯ ಶಾಸಕರೆಲ್ಲರೂ ಜೊತೆಗೂಡಿ ಹೋರಾಟ ನಡೆಸುತ್ತೇವೆ’ ಎಂದರು.

ಸಮಿತಿ ಅಧ್ಯಕ್ಷ ಶ್ರೀಧರ ಗೌಡ ಮಾತನಾಡಿ ‘ರಾಜ್ಯದಲ್ಲಿ 6,618 ಹಾಗೂ ಜಿಲ್ಲೆಯಲ್ಲಿ 3,612 ಮಂದಿ ಎಂಡೋ ಪೀಡಿತರಿದ್ದಾರೆ.  ಎಂಡೋ ಸಂತ್ರಸ್ತರಿಗೆ ₹10 ಲಕ್ಷ  ಪರಿಹಾರ, ₹5 ಸಾವಿರ ಮಾಸಾಶನ, ಕೊಕ್ಕಡದಲ್ಲಿ ಶಾಶ್ವತ ಪುನರ್ವಸತಿ ಕೇಂದ್ರ ಸ್ಥಾಪಿಸುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು. ಅವರ ನೋವಿಗೆ ಸರ್ಕಾರ ಸ್ಪಂದಿಸಬೇಕು’ ಎಂದು ಹೇಳಿದರು.

ಕೌಕ್ರಾಡಿ ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಸೇವಾ ಭಾರತಿಯ ವಿನೋದ್ ಶೆಣೈ ಮಾತನಾಡಿದರು.

ಕಾವು  ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ತುಕ್ರಪ್ಪ ಶೆಟ್ಟಿ, ಎಂಡೋಪಾಲನಾ ಕೇಂದ್ರದ ಮ್ಯಾನೇಜರ್ ಗೋಪಾಲಕೃಷ್ಣ ಭಟ್, ಹೋರಾಟ ಸಮಿತಿ ಸದಸ್ಯ ಅಲ್ಬರ್ಟ್ ಮಿನೇಜಸ್, ಸಮಿತಿ ಕಾರ್ಯದರ್ಶಿ ಪುರಂದರ , ಜನಾರ್ದನ ಗೌಡ, ಎಂಡೋ ಸಂತ್ರಸ್ತ ಬಾಲಕ ಪ್ರದೀಪ್ ಇದ್ದರು. 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !