ಮಂಗಳೂರು: ಲಾಕ್ಡೌನ್ ಸಂದರ್ಭದಲ್ಲಿ ಮುಟ್ಟುಗೋಲು ಹಾಕಿರುವ ವಾಹನಗಳಿಗೆ ಪೊಲೀಸ್ ಇಲಾಖೆಯಲ್ಲಿಯೇ ದಂಡ ವಿಧಿಸಿ ಬಿಡುಗಡೆಗೊಳಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಮನವಿ ಮಾಡಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಅವರು, ‘ಸರ್ಕಾರದ ಅಸಮರ್ಪಕ ನೀತಿಯಿಂದ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳಿಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ಅವಶ್ಯಕ ವಸ್ತುಗಳ ಅಂಗಡಿ ತೆರೆಯಲು ಅವಕಾಶ ನೀಡಲಾಗಿದ್ದು, ಕೆಲವು ವಸ್ತುಗಳಿಗೆ 6 ಗಂಟೆಯವರೆಗೆ ಅವಕಾಶವಿದೆ. ಈ ವೇಳೆ ಜನರು ತಮ್ಮ ವಾಹನಗಳಲ್ಲಿ ನಗರಕ್ಕೆ ಬಂದ ಸಂದರ್ಭದಲ್ಲಿ ಪೊಲೀಸರು ಸಾವಿರಾರು ವಾಹನಗಳನ್ನು ಮುಟ್ಟುಗೋಲು ಹಾಕಿಕೊಂಡು ಪ್ರಕರಣ ದಾಖಲಿಸಿದ್ದಾರೆ’ ಎಂದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 3 ಸಾವಿರ ವಾಹನಗಳನ್ನು ಮುಟ್ಟುಗೋಲು ಹಾಕಲಾಗಿದೆ. ದಿಢೀರ್ ವಾಹನಗಳನ್ನು ಮುಟ್ಟುಗೋಲು ಹಾಕಿ ಪ್ರಕರಣ ದಾಖಲಿಸುವುದು ಸರಿಯಲ್ಲ. ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ ಪೊಲೀಸ್ ಇಲಾಖೆಗೆ ಈ ಕಾನೂನನ್ನು ವಿಧಿಸದಂತೆ ನಿರ್ದೇಶನ ನೀಡಬೇಕು’ ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.