ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕರಾವಳಿಯಲ್ಲಿ ಡ್ರಗ್‌ ಹಾವಳಿ ನಿಯಂತ್ರಿಸಿ: MLC ಮಂಜುನಾಥ ಭಂಡಾರಿ ಪತ್ರ

ಗೃಹಸಚಿವರಿಗೆ ಎಂಎಲ್‌ಸಿ ಮಂಜುನಾಥ ಭಂಡಾರಿ ಪತ್ರ
Published 3 ಸೆಪ್ಟೆಂಬರ್ 2024, 2:50 IST
Last Updated 3 ಸೆಪ್ಟೆಂಬರ್ 2024, 2:50 IST
ಅಕ್ಷರ ಗಾತ್ರ

ಮಂಗಳೂರು: ‘ಕರಾವಳಿ ಜಿಲ್ಲೆಗಳಲ್ಲಿ ಡ್ರಗ್ ಮಾಫಿಯಾ ಹಾವಳಿ ಹೆಚ್ಚಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ಡ್ರಗ್ ಮಾಫಿಯಾದ ಪಾತ್ರ ಸ್ಪಷ್ಟವಾಗಿ ಗೋಚರಿಸುತ್ತಿದೆ. ಇದನ್ನು ತಡೆಗಟ್ಟಲು ಕಠಿಣ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಪತ್ರ ಬರೆದಿದ್ದಾರೆ.

'ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ, ಕೊಲೆ, ದರೋಡೆ, ಡಕಾಯತಿ ಪ್ರಕರಣ ಹೆಚ್ಚಾಗುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ಮಾದಕ ವ್ಯಸನದಿಂದಾಗಿ ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ವಿದ್ಯಾರ್ಥಿಗಳು ಮತ್ತು ಯುವಕರು ಮಾದಕ ವ್ಯಸನಗಳಿಗೆ ಬಲಿಯಾಗುತ್ತಿದ್ದಾರೆ. ಇಸ್ಪೀಟು, ಮಟ್ಕಾ ಮೊದಲಾದ ಅಕ್ರಮ ಚಟುಚಟಿಕೆ ಹಾವಳಿ ಹೆಚ್ಚಾಗಿದೆ’ ಎಂದು ಆ. 29ರಂದು ಬರೆದ ಪತ್ರದಲ್ಲಿ ಅವರು ದೂರಿದ್ದಾರೆ.

‘ಕರಾವಳಿ ಭಾಗದಲ್ಲಿ ಇಂತಹ ಕಾನೂನು ಬಾಹಿರ ಚಟುವಟಿಕೆ ಹಾಗೂ ಅಪರಾಧ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ತಡೆಯಲು ಗೃಹ ಇಲಾಖೆ ಹಾಗೂ ಪೋಲಿಸ್ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT