ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದಲಿತರ ಕಾಳಜಿ ಇಲ್ಲದ ಕಾಂಗ್ರೆಸ್: ಪ್ರತಾಪಸಿಂಹ ನಾಯಕ್

Published 2 ಸೆಪ್ಟೆಂಬರ್ 2024, 15:26 IST
Last Updated 2 ಸೆಪ್ಟೆಂಬರ್ 2024, 15:26 IST
ಅಕ್ಷರ ಗಾತ್ರ

ಮಂಗಳೂರು: ಪರಿಶಿಷ್ಟ ಸಮುದಾಯವನ್ನು ಕಾಂಗ್ರೆಸ್‌ ಮತ ಬ್ಯಾಂಕ್ ಆಗಿ ನೋಡುತ್ತಿದೆಯೇ ವಿನಾ ಅವರ ಬಗ್ಗೆ ಆ ಪಕ್ಷಕ್ಕೆ ಕಾಳಜಿ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಆರೋಪಿಸಿದರು.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ, ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಸೇರಿದ ಟ್ರಸ್ಟ್‌ಗೆ ಅಕ್ರಮವಾಗಿ ನಿವೇಶನ ಮಂಜೂರು ಮಾಡಿರುವ ಬಗ್ಗೆ, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಇದನ್ನೇ ಇಟ್ಟುಕೊಂಡು, ಸಚಿವ ಎಂ.ಬಿ.ಪಾಟೀಲ, ಪರಿಶಿಷ್ಟ ಸಮುದಾಯಕ್ಕೆ ಸೇರಿದ ನಾರಾಯಣ ಸ್ವಾಮಿ ಅವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದು ಅಕ್ಷಮ್ಯವಾಗಿದ್ದು, ಸಚಿವರು, ಬೇಷರತ್ ಕ್ಷಮೆಯಾಚಿಸಬೇಕು’ ಎಂದು ಆಗ್ರಹಿಸಿದರು.

ಶೋಷಿತ ಸಮುದಾಯದವರೊಬ್ಬರು ಬಗ್ಗೆ ಹಗುರವಾಗಿ ಮಾತನಾಡಿರುವುದು ಕಾಂಗ್ರೆಸ್‌ನ ದಲಿತ ವಿರೋಧಿ ನೀತಿಯ ಭಾಗವಾಗಿದೆ ಎಂಬುದನ್ನು ಇದು ತೋರಿಸುತ್ತದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನೂ ಸಹ ಕಾಂಗ್ರೆಸ್ ಟೀಕಿಸದೆ ಬಿಟ್ಟಿಲ್ಲ ಎಂದರು.

ಪಕ್ಷದ ಸುನೀತಾ, ರಾಜಗೋಪಾಲ ರೈ, ಅರುಣ್ ಶೇಟ್, ಗುರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT