ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂ.ನಾರಾಯಣ ಅಭಿನಂದನಾ ಸಮಾರಂಭ 30ರಂದು

Last Updated 25 ನವೆಂಬರ್ 2022, 9:17 IST
ಅಕ್ಷರ ಗಾತ್ರ

ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಸಂಗೀತ ವಿದ್ವಾನ್ ಎಂ.ನಾರಾಯಣ ಅವರಿಗೆ ಸಾರ್ವಜನಿಕ ಅಭಿನಂದನೆ ಸಲ್ಲಿಸಲು ಇದೇ 30ರಂದು ಸಂಜೆ 5.30ಕ್ಕೆ ಸುರತ್ಕಲ್‌ನ ಗೋವಿಂದದಾಸ ಕಾಲೇಜಿನಲ್ಲಿ ವಿಶೇಷ ಸಮಾರಂಭ ಏರ್ಪಡಿಸಲಾಗಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ‌ಇಲ್ಲಿ ಶುಕ್ರವಾರ ಮಾಹಿತಿ ನೀಡಿದ ಅಭಿನಂದನ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿದ್ವಾನ್ ಕೆ. ಚಂದ್ರಶೇಖರ ನಾವಡ, ‘ಎಂ.ನಾರಾಯಣ ಅವರು ಸಂಗೀತಗಾರರಾಗಿ, ಸಂಗೀತ ಗುರುಗಳಾಗಿ ನಾಲ್ಕು ದಶಕಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಕರಾವಳಿಯ ಪ್ರಸಿದ್ಧ ದೇವಸ್ಥಾನಗಳ ಕುರಿತು 800ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಶಿಷ್ಯವೃಂದ ಹಾಗೂ ಅಭಿಮಾನಿ ಬಳಗ ಸೇರಿ ಅವರಿಗೆ ಅಭಿನಂದನೆ ಸಲ್ಲಿಸಲಿದೆ’ ಎಂದರು.

‘ಎಂ. ನಾರಾಯಣ ಅವರು ರಚಿಸಿರುವ ಕೃತಿಗಳನ್ನು ಆಧರಿಸಿಬೆಂಗಳೂರಿನ ಅದಿತಿ ಪ್ರಹ್ಲಾದ್ ಅಂದು ಸಂಜೆ 5.30ಕ್ಕೆ ಸಂಗೀತ ಕಛೇರಿ ನಡೆಸಿಕೊಡಲಿದ್ದಾರೆ. ಬೆಂಗಳೂರಿನ ವೈಭವ್ ರಮಣಿ ವಯಲಿನ್‌ನಲ್ಲಿ, ಚೆನ್ನೈನ ಎಸ್. ಹರಿಹರನ್ ಮೃದಂಗದಲ್ಲಿ ಹಾಗೂ ಸುರತ್ಕಲ್‌ನ ಸುಮುಖ ಕಾರಂತ್ ಖಂಜೀರದಲ್ಲಿ ಸಹಕರಿಸುವರು’ ಎಂದರು.

‘ಬಳಿಕ ಸಂಸದ ನಳಿನ್‌ಕುಮಾರ್ ಕಟೀಲ್‌ ಅಧ್ಯಕ್ಷತೆಯಲ್ಲಿ ಅಭಿನಂದನ ಸಮಾರಂಭ ನಡೆಯಲಿದ್ದು, ಶಾಸಕ ಡಾ. ವೈ. ಭರತ್ ಶೆಟ್ಟಿ, ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕ ಅನಂತಪದ್ಮನಾಭ ಆಸ್ರಣ್ಣ, ಮಂಗಳೂರು ವಿಶ್ವವಿದ್ಯಾಲಯ ಕುಲಪತಿ ಡಾ.ಪಿ.ಎಸ್‌.ಯಡಪಡಿತ್ತಾಯ, ಆಳ್ವಾಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಸುರತ್ಕಲ್ ಹಿಂದೂ ವಿದ್ಯಾದಾಯಿನಿ ಸಂಘದ ಅಧ್ಯಕ್ಷ ಜಯಚಂದ್ರ ಹತ್ವಾರ್, ಗೋವಿಂದದಾಸ ಕಾಲೇಜಿನ ಪ್ರಾಂಶುಪಾಲ ಪ್ರೊ. ಕೃಷ್ಣಮೂರ್ತಿ ಭಾಗವಹಿಸುವರು ಕೆ.ವಿ. ರಮಣ್ ಅಭಿನಂದನಾ ಭಾಷಣ ಮಾಡುವರು’ ಎಂದರು.
ಅಭಿನಂದನಾ ಸಮಿತಿ ಗೌರವಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು, ಅಧ್ಯಕ್ಷ ವಿದ್ವಾನ್ ನಾಗೇಶ್ ಎ. ಬಪ್ಪನಾಡು, ಖಜಾಂಚಿ ಅರುಣಾ ರಾವ್ ಕಟೀಲು, ಉಪಾಧ್ಯಕ್ಷ ಪಿ.ನಿತ್ಯಾನಂದ ರಾವ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT